ADVERTISEMENT

ಅನಪುರದಲ್ಲಿ ಕಲುಷಿತ ನೀರು ಕುಡಿದು ಮತ್ತೊಬ್ಬ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2023, 10:12 IST
Last Updated 16 ಫೆಬ್ರುವರಿ 2023, 10:12 IST
ಮೃತ ಸಾವಿತ್ರಮ್ಮ ಅವರ ಮನೆಯಲ್ಲಿ ಸಂಗ್ರಹಿಸಿ ಕುಡಿದಿದ್ದ ನೀರು (ಮೃತರ ಪತಿ ವೆಂಕಟಪ್ಪ ತೋರಿಸಿದರು)
ಮೃತ ಸಾವಿತ್ರಮ್ಮ ಅವರ ಮನೆಯಲ್ಲಿ ಸಂಗ್ರಹಿಸಿ ಕುಡಿದಿದ್ದ ನೀರು (ಮೃತರ ಪತಿ ವೆಂಕಟಪ್ಪ ತೋರಿಸಿದರು)   

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ನರಸಮ್ಮ ಯಲ್ಲಪ್ಪ (75) ಜಿಲ್ಲಾಸ್ಪತ್ರೆಯಲ್ಲಿ ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ. ಸಾವಿತ್ರಮ್ಮ (35), ಸಾಯಮ್ಮ (72) ಮೃತಪಟ್ಟಿದ್ದರು.

ಕಳೆದ ಮೂರು ದಿನಗಳಿಂದ ಜಿಲ್ಲಾಸ್ಪತ್ರೆಯಲ್ಲಿ 23 ಜನರು ದಾಖಲಾಗಿದ್ದಾರೆ. ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ADVERTISEMENT

7 ಜನ ದಾಖಲು: ಜಿಲ್ಲಾಸ್ಪತ್ರೆಗೆ ಮತ್ತೆ 7 ಜನ ದಾಖಲಾಗಿದ್ದಾರೆ. ಬುಧವಾರ ರಾತ್ರಿ, ಗುರುವಾರ ಬೆಳಿಗ್ಗೆ ವಾಂತಿ ಭೇದಿಯಿಂದ ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.

‘23 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಾರನ್ನು ಡಿಸಾರ್ಜ್‌ ಮಾಡಿಲ್ಲ. ಯುವಕರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೃದ್ಧರು ಸ್ಪಂದಿಸುತ್ತಿಲ್ಲ. ಎಲ್ಲರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ರಿಜ್ವಾನಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.