ADVERTISEMENT

ಹುಣಸಗಿ ತಹಶೀಲ್ದಾರ್ ಕಚೇರಿ ಸ್ಥಳಾಂತರಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 14:37 IST
Last Updated 23 ಸೆಪ್ಟೆಂಬರ್ 2024, 14:37 IST
ಹುಣಸಗಿ ಪಟ್ಟಣದ ತಹಶೀಲ್ದಾರ್ ಕಚೇರಿಯನ್ನು ಸ್ಥಳಾಂತರ ಮಾಡದಂತೆ ಭ್ರಷ್ಟಾಚಾರ ವಿರೋಧಿ ದಳದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು
ಹುಣಸಗಿ ಪಟ್ಟಣದ ತಹಶೀಲ್ದಾರ್ ಕಚೇರಿಯನ್ನು ಸ್ಥಳಾಂತರ ಮಾಡದಂತೆ ಭ್ರಷ್ಟಾಚಾರ ವಿರೋಧಿ ದಳದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು   

ಹುಣಸಗಿ: ಇಲ್ಲಿನ ಯುಕೆಪಿ ಕ್ಯಾಂಪಿನ ಪ್ರದೇಶದಲ್ಲಿರುವ ಹುಣಸಗಿ ತಹಶೀಲ್ದಾರ್ ಕಚೇರಿಯನ್ನು ಬೇರೆ ಕಡೆಗೆ ಸ್ಥಳಾಂತರಿಸಬಾರದು ಎಂದು ಭ್ರಷ್ಟಾಚಾರ ವಿರೋಧಿ ದಳದ ಜಿಲ್ಲಾ ಘಟಕ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೇಕಪ್ಪಗೋಳ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ಸದ್ಯ ಕಾರ್ಯ ನಿರ್ವಹಿಸುತ್ತಿರುವ ತಹಶೀಲ್ದಾರ್ ಕಚೇರಿಯು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳು ಹಾಗೂ ರೈತಾಪಿ ಜನರಿಗೆ ಅನುಕೂಲವಾಗಿದೆ. ಬೇರೆ ಕಡೆ ಸ್ಥಳಾಂತರಿಸಿದರೆ ಜನರಿಗೆ ಅನಾನುಕೂಲ ಆಗಲಿದೆ ಎಂದರು.

ಒಂದು ವೇಳೆ ಸ್ಥಳಾಂತರಕ್ಕೆ ಪ್ರಯತ್ನಿಸಿದರೆ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾಧ್ಯಕ್ಷ ಕಾಶಿನಾಥ ಹಾದಿಮನಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಕಾಮನಟಗಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.