ADVERTISEMENT

ವಡಗೇರಾ: ರಾಮಸ್ವಾಮಿ ವರದಿ ಜಾರಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 4:17 IST
Last Updated 25 ಜನವರಿ 2022, 4:17 IST
ರಾಮಸ್ವಾಮಿ ವರದಿ ಜಾರಿ ತಡೆಯುವಂತೆ ಒತ್ತಾಯಿಸಿ ವಡಗೇರಾ ತಾಲ್ಲೂಕು ಗ್ರಾಮಲೆಕ್ಕಾಧಿಕಾರಿಗಳ ಸಂಘದ ಪದಾಧಿಕಾರಿಗಳು ತಹಶೀಲ್ದಾರ್‌ ಸುರೇಶ ಅಂಕಲಗಿ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು
ರಾಮಸ್ವಾಮಿ ವರದಿ ಜಾರಿ ತಡೆಯುವಂತೆ ಒತ್ತಾಯಿಸಿ ವಡಗೇರಾ ತಾಲ್ಲೂಕು ಗ್ರಾಮಲೆಕ್ಕಾಧಿಕಾರಿಗಳ ಸಂಘದ ಪದಾಧಿಕಾರಿಗಳು ತಹಶೀಲ್ದಾರ್‌ ಸುರೇಶ ಅಂಕಲಗಿ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು   

ವಡಗೇರಾ: ಹಾರನಹಳ್ಳಿ ರಾಮಸ್ವಾಮಿ ಆಯೋಗದ ವರದಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದ ವಡಗೇರಾ ತಾಲ್ಲೂಕು ಗ್ರಾಮಲೆಕ್ಕಾಧಿಕಾರಿಗಳ ಸಂಘದ ಪದಾಧಿಕಾರಿಗಳು ವರದಿ ಜಾರಿಗೊಳಿಸದಂತೆ ತಹಶೀಲ್ದಾರ್ ಸುರೇಶ್ ಅಂಕಲಗಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ತಾಲ್ಲೂಕು ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ಕಂದಾಯ ಇಲಾಖೆಯು ಎಲ್ಲ ಇಲಾಖೆಗಳಿಗೆ ಮಾತೃ ಸ್ಥಾನದಲ್ಲಿದೆ. ಹಾರನಹಳ್ಳಿ ರಾಮಸ್ವಾಮಿ ಅವರ ನೇತೃತ್ವದಲ್ಲಿ ಮೊದಲ ಕರ್ನಾಟಕ ಆಡಳಿತ ಸುಧಾರಣಾ ಆಯೋಗ ರಚಿಸಲಾಗಿತ್ತು. ಈ ವರದಿಯಲ್ಲಿ ಕಂದಾಯ ಇಲಾಖೆಯ ಆಡಳಿತಕ್ಕೆ ವ್ಯತಿ ರಿಕ್ತವಾದ ಅಂಶಗಳಿವೆ ಎಂದರು.

ಉಪಾಧ್ಯಕ್ಷ ಗೋಲ್ಲಾಳಪ್ಪ ಕಟಿಗಾರ್ ಮಾತನಾಡಿ, ಗ್ರಾಮಲೆಕ್ಕಾಧಿಕಾರಿಗಳು ಕೈಪಿಡಿಯಂತೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವರದಿ ಜಾರಿ ಮಾಡುವ ಅವಶ್ಯಕತೆ ಇಲ್ಲ. ಈಗಾಗಲೇ ಕಂದಾಯ ಇಲಾಖೆ ಕಾರ್ಯದರ್ಶಿಗಳಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ. ಸರ್ಕಾರ ಗ್ರಾಮ‌ಲೆಕ್ಕಾಧಿಕಾರಿಗಳ ಅಧಿಕಾರ ಮತ್ತು ಕರ್ತವ್ಯಗಳನ್ನು ಪರಿಶೀಲಿಸಿ, ವರದಿ ಜಾರಿಗೊಳಿಸದಂತೆ ನಿರ್ಣಯ ತೆಗೆದು ಕೊಳ್ಳಬೇಕು ಎಂದು ಒತ್ತಾಯಿಸಿದರು.‌‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.