ಯಾದಗಿರಿ: ಜಿಲ್ಲೆಯಲ್ಲಿ ಜೋಳ, ಭತ್ತ 5 ಖರೀದಿ ಆರಂಭಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಸರ್ಕಾರದಿಂದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜೋಳ, ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಭತ್ತ -ಜೋಳ ಬೆಳೆದ ರೈತರು, ಬೆಂಬಲ ಬೆಲೆ ಪಡೆಯಲು ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಮನವಿ ಮಾಡಿದ ಕಾರಣ ಯಾದಗಿರಿ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ ಸುರಪುರ, ಶಹಾಪುರದಲ್ಲಿ ಕೆಎಫ್‌ಸಿಎಸ್‌ಸಿ ಆವರಣ, ಹುಣಸಗಿಯಲ್ಲಿ ಟಿಎಪಿಎಂಎಸ್ ಆವರಣದಲ್ಲಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ ನಾಯ್ಕಲ್‌ನಲ್ಲಿ ಆರಂಭಿಸಲಾಗುತ್ತಿದೆ. ರೈತರು ಸರ್ಕಾರದ ಈ ಯೋಜನೆಯ ಲಾಭ ಪಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.