ADVERTISEMENT

ಭತ್ತ ಕಟಾವು: ಖಾಸಗಿ ಯಂತ್ರಗಳಿಗೆ ದರ ನಿಗದಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 4:01 IST
Last Updated 10 ನವೆಂಬರ್ 2020, 4:01 IST
ಡಾ. ರಾಗಪ್ರಿಯಾ ಆರ್.,
ಡಾ. ರಾಗಪ್ರಿಯಾ ಆರ್.,   

ಯಾದಗಿರಿ: ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಖಾಸಗಿ ಭತ್ತ ಕಟಾವು ಯಂತ್ರಗಳಿಗೆ ಪ್ರತಿ ಗಂಟೆಗೆ ₹1,900 ಬಾಡಿಗೆ ನಿಗದಿ ಪಡಿಸಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾಆರ್. ಆದೇಶಿಸಿದ್ದಾರೆ.

ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆದ ರೈತರಿಗೆ ಹೆಚ್ಚಿನ ಅರ್ಥಿಕ ಹೊರೆಯಾಗಲಿರುವ ನಿಟ್ಟಿನಲ್ಲಿ ಖಾಸಗಿಯಾಗಿ ಭತ್ತ ಕಟಾವು ಮಾಡುವ ಯಂತ್ರಗಳಿಗೆ ಪ್ರತಿ ಗಂಟೆಗೆ ₹1,900 ನಿಗದಿ ಪಡಿಸಲಾಗಿದೆ. ಎಲ್ಲಾ ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ಇದನ್ನು ತಪ್ಪದೇ ಪಾಲಿಸಬೇಕು. ತಪ್ಪಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT