ADVERTISEMENT

ಯಾದಗಿರಿಯಲ್ಲಿ ಭತ್ತ ಖರೀದಿ ಕೇಂದ್ರಗಳ ಸ್ಥಾಪನೆ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ

ಜಿಲ್ಲಾಧಿಕಾರಿ ರಾಗಪ್ರಿಯಾ ಆರ್., ಹೇಳಿಕೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2021, 12:39 IST
Last Updated 20 ನವೆಂಬರ್ 2021, 12:39 IST
ಡಾ.ರಾಗಪ್ರಿಯಾ.ಆರ್‌
ಡಾ.ರಾಗಪ್ರಿಯಾ.ಆರ್‌   

ಯಾದಗಿರಿ: 2021-22ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಭತ್ತ ಖರೀದಿ ಕೆಂದ್ರಗಳನ್ನು ಸ್ಥಾಪನೆ ಮಾಡಲಾಗಿದ್ದು, ರೈತರು ಸದುಪಯೋಗ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2021-22 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಭತ್ತ ಖರೀದಿಸಲು ರೈತರ ನೋಂದಣಿ ಮಾಡುವ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಲ್‌ಗೆ ₹1,940 ಹಾಗೂ ಗ್ರೇಡ್-ಎ ಪ್ರತಿ ಕ್ವಿಂಟಲ್‌ಗೆ ₹1,960 ದರ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಕೃಷಿ ಇಲಾಖೆಯವರು ಸಿದ್ಧಪಡಿಸಿದ ಫ್ರೂಟ್ಸ್ ಎಂಬ ತಂತ್ರಾಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೋಂದಾಯಿಸಿಕೊಳ್ಳುವುದು. ಒಂದು ವೇಳೆ ಫ್ರೂಟ್ಸ್ ತಂತ್ರಾಂಶದಲ್ಲಿ ತೊಂದರೆಯಿದ್ದಲ್ಲಿ ಹತ್ತಿರ‌ದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

ನೋಂದಣಿ ಕೇಂದ್ರಗಳು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಯಾದಗಿರಿ (ಮೊ:77608 26959) , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಸುರಪುರ ಸಗಟು ಮಳಿಗೆ, ವೆಂಕಟಾಪುರ, (ನಜೀರ್ ಅಹ್ಮದ್ ಮೊ: 99725 22793), ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಆವರಣ, ಶಹಾಪುರ (ನಹೀಮ್ ಅಹ್ಮದ್ ಮೊ: 7483719938), ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಆವರಣ, ಮಹಾದೇವಪ್ಪ ಬಳೆ ಕಲ್ಯಾಣ ಮಂಟಪ ಎದುರುಗಡೆ, ತಾಳಿಕೋಟೆ ರಸ್ತೆ, ಹುಣಸಗಿ ( ಸಿದ್ದಣ್ಣ ನಾಯಕ ಮೊ: 79751 14798), ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ನಾಯ್ಕಲ್ ಗ್ರಾಮ (ಅಪ್ಪಯ್ಯ ಹಿರೇಮಠ ಮೊ: 90369 35603) ಸಂಪರ್ಕಿಸಬಹುದು ಎಂದರು.

‌ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಉಪನಿರ್ದೇಶಕ ರಾಜು, ಜಂಟಿ ಕೃಷಿ ನಿರ್ದೇಶಕ ಅಭಿದ್ ಎಸ್.ಎಸ್. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.