ADVERTISEMENT

2ಎ ಮೀಸಲಾತಿಗೆ ಆಗ್ರಹಿಸಿ ಧರಣಿ

ಪಂಚಮಸಾಲಿ ಸಮಾಜದ ಮುಖಂಡರಿಂದ ಮನವಿ

​ಪ್ರಜಾವಾಣಿ ವಾರ್ತೆ
Published 6 ಮೇ 2022, 4:17 IST
Last Updated 6 ಮೇ 2022, 4:17 IST
ಹುಣಸಗಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ತಹಶೀಲ್ದಾರ್ ಅಶೋಕ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು
ಹುಣಸಗಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ತಹಶೀಲ್ದಾರ್ ಅಶೋಕ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು   

ಹುಣಸಗಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿಕರ್ನಾಟಕ ರಾಜ್ಯ ವೀರಶೈವ ಪಂಚಮಸಾಲಿ ಸಂಘದ ಮುಖಂಡರು ಪಟ್ಟಣದ ತಹಶೀಲ್ದಾರ್ ಕಚೇರಿಯ ಎದುರು ಗುರುವಾರ ಧರಣಿ, ಪ್ರತಿಭಟನೆ ನಡೆಸಿದರು.

ಸಂಘದ ಮುಖಂಡ ಹೊನ್ನಕೇಶವ ದೇಸಾಯಿ, ಮಾತನಾಡಿ, ಕಳೆದ ಫೆಬ್ರುವರಿ ತಿಂಗಳಿನಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 14 ರೊಳಗಾಗಿ 2ಎ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇಂದಿಗೂ ಅದನ್ನು ಈಡೇರಿಸದಿರುವುದು ಖಂಡನೀಯ. ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.

ಮುಖಂಡ ಭೀಮನಗೌಡ ಬಿರಾದಾರ ಮಾತನಾಡಿ, ಸಮಾಜದ ಜಗದ್ಗುರುಗಳು ಕೂಡಲಸಂಗಮದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಹಾಗೂ 14 ದಿನಗಳ ಸತ್ಯಾಗ್ರಹ ಸೇರಿದಂತೆ ಇನ್ನಿತರ ಹಲವಾರು ಮಾರ್ಗದಿಂದ ಹೋರಾಟ ನಡೆಸುತ್ತಿದ್ದರೂ ಸಹ ತೀವ್ರ ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ. ಇನ್ನಾದರೂ ಸರ್ಕಾರ ತನ್ನ ಮೊಂಡುತನವನ್ನು ಬಿಟ್ಟು ಮಾತು ನೀಡಿದಂತೆ 2ಎ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಲಿ ಎಂದು ಆಗ್ರಹಿಸಿದರು

ADVERTISEMENT

ಮುಖಂಡರು ತಹಶೀಲ್ದಾರ್ ಅಶೋಕಕುಮಾರ್ ಸುರಪುರಕರ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಸಮಾಜದ ಮುಖಂಡರಾದ ಬಸವರಾಜ ಮಲಗಲದಿನ್ನಿ, ವೀರೇಶ ಚಿಂಚೋಳಿ, ಮಹಾದೇವಪ್ಪ ಬೂದಿಹಾಳ, ಅಂಬರೀಷ್ ದೇಸಾಯಿ, ರಾಜಶೇಖರ ದೇಸಾಯಿ, ಕುಮಾರ ಬಂಡೋಳಿ, ಶಾಂತಗೌಡ ಪಾಟೀಲ, ರಾಕೇಶ್ ಬಳೂರಗಿ, ಸಿದ್ಧನಗೌಡ ಬಿರಾದಾರ, ಬಸನಗೌಡ ತಾಳಿಕೋಟಿ, ಮಲ್ಲಿಕಾರ್ಜುನ ಕವಿತಾಳ, ಗೌಡಪ್ಪಗೌಡ ಬಿರಾದಾರ್, ಮಲ್ಲನಗೌಡ ಆರಲಗಡ್ಡಿ, ಸತೀಶ್ ಬಿರಾದಾರ ಸೇರಿದಂತೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.