ಸುರಪುರ: ‘ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಉಪನ್ಯಾಸಕರ ಜೊತೆಗೆ ಪಾಲಕರ ಸಹಕಾರವೂ ಮುಖ್ಯ’ ಎಂದು ಡಯಟ್ ನಿವೃತ್ತ ಉಪನ್ಯಾಸಕ ಮಲ್ಲಿಕಾರ್ಜುನ ಪಾಟೀಲ ಹೇಳಿದರು.
ಶರಣಬಸವ ಸ್ವಾತಂತ್ರ್ಯ ಪದವಿಪೂರ್ವ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು.
‘ಉಪನ್ಯಾಸಕರು ಚೆನ್ನಾಗಿ ಪಾಠ ಮಾಡುತ್ತಾರೆ. ಆದರೆ ಬಹುತೇಕ ಪಾಲಕರು ಆ ಪಾಠವನ್ನು ಮನನ ಮಾಡಿಕೊಳ್ಳಲು ಬಿಡುವುದಿಲ್ಲ. ಮನೆಗೆಲಸ ಹಚ್ಚುವುದು ಇಲ್ಲವೇ ಟಿವಿ ನೋಡಲು ಅವಕಾಶ ಮಾಡಿಕೊಡುವುದು ಮಾಡುತ್ತಾರೆ. ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಆಗುವುದಿಲ್ಲ’ ಎಂದರು.
‘ಈಗ ಕಾಲೇಜಿನಲ್ಲಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಕ್ರೀಡೋ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಕಲಿಕಾ ವಿಧಾನಗಳಲ್ಲಿ ಅಮೂಲಾಗ್ರ ಬದಲಾವಣೆ ತರುತ್ತಿದೆ. ಇದರಿಂದ ಫಲಿತಾಂಶ ಹೆಚ್ಚಳ, ಹಿಂದುಳಿದ ವಿದ್ಯಾರ್ಥಿಗಳ ಸುಧಾರಣೆಯಾಗುತ್ತದೆ’ ಎಂದರು.
ದ್ವಿತೀಯ ಪಿಯುಸಿಯಲ್ಲಿ ಶೇ 97.67 ಅಂಕ ಪಡೆದ ಮತ್ತು ಜೆಇಇ ಪರೀಕ್ಷೆಯಲ್ಲಿ 1197ನೇ ರ್‍ಯಾಂಕ್ ಪಡೆದ ಕಾಲೇಜಿನ ವಿದ್ಯಾರ್ಥಿ ರಾಣಿ ಯಶೋಧಾ ರಾಜಾ ಅಪ್ಪಾರಾವನಾಯಕ ಅವರನ್ನು ಸನ್ಮಾನಿಸಲಾಯಿತು.
ಪ್ರಾಚಾರ್ಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪಾಲಕರು, ಮಕ್ಕಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.