ಯಾದಗಿರಿ: ‘ಗುರುಮಠಕಲ್‌ನಲ್ಲಿ ಪತ್ತೆಯಾದ ಸಾವಿರಾರು ಕ್ವಿಂಟಲ್ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಯಾರೆಲ್ಲ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದರ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ಕೆಡಿಪಿ ಸಭೆಯ ಬಳಿಕ ಮಂಗಳವಾರ ಮಾಧ್ಯಮ ಪ‍್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ’ಅಕ್ಕಿ ಅಕ್ರಮ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಅಧಿಕಾರಿಗಳೇ ಮುಂದಾಗಿ ದಾಳಿ ಮಾಡಿದ್ದಾರೆ. ತಪ್ಪು ಮಾಡಿರುವ ಯಾವೆಲ್ಲ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಎಂಬುದರ ವರದಿಯೂ ಈಗಾಗಲೇ ಸಲ್ಲಿಕೆಯಾಗಿದೆ’ ಎಂದರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ‘ಸರ್ಕಾರಕ್ಕೆ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಕ್ರಮದ ಬಗ್ಗೆ ಗೊತ್ತಾಗಲಿದೆ. ಆಂತರಿಕವಾಗಿ ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ’ ಎಂದು ಹೇಳಿದರು.
ಈ ವೇಳೆ ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರು, ರಾಜಾ ವೇಣುಗೋಪಾಲ್ ನಾಯಕ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.