ಕೆಂಭಾವಿ (ಯಾದಗಿರಿ ಜಿಲ್ಲೆ): ಹುಣಸಗಿ ತಾಲ್ಲೂಕಿನ ಕೆಂಭಾವಿ ಸಮೀಪದ ಮುದನೂರ (ಬಿ) ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾದವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.
ಶುಕ್ರವಾರ 20ಕ್ಕೂ ಹೆಚ್ಚು ಜನರಲ್ಲಿ ವಾಂತಿ ಭೇದಿ ಪ್ರಕರಣಗಳು ಪತ್ತೆಯಾಗಿತ್ತು.
ಶುಕ್ರವಾರ ಮಧ್ಯರಾತ್ರಿಯಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳವಾಗಿದೆ.
ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಸ್ವಸ್ಥರಾದವರ ಸಂಖ್ಯೆ ಹೆಚ್ಚಿದ್ದರಿಂದ ವಾರ್ಡ್ ಗಳಲ್ಲಿ ಜಾಗವಿಲ್ಲದೆ ಸಿಬ್ಬಂದಿ ಹೊರಗಡೆ ಬೆಡ್ ಹಾಕಿದ್ದಾರೆ.
ತೀವ್ರ ಅಸ್ವಸ್ಥರಾದವರನ್ನು ಶಹಾಪುರ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇಲ್ಲಿಯವರೆಗೆ ಒಟ್ಟು 52 ವಾಂತಿ ಭೇದಿ ಪ್ರಕರಣಗಳು ಕಂಡು ಬಂದಿವೆ. 6 ಮಕ್ಕಳನ್ನು ಶಹಾಪುರ ಮಕ್ಕಳ ತಜ್ಞರ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಮುದಾಯ ಆಸ್ಪತ್ರೆಯ ಎಲ್ಲ ಬೆಡ್ ಗಳು ಭರ್ತಿಯಾಗಿವೆ. ಅವಿರತ ಸೇವೆಯಲ್ಲಿ ವೈದ್ಯ, ಸಿಬ್ಬಂದಿ ನಿರತರಾಗಿದ್ದಾರೆ. ಸುರಪುರ ಅಸ್ಪತ್ರೆಗೆ ಹೆಚ್ಚಿನ ರೋಗಿಗಳನ್ನು ಕಳಿಸಲು ವ್ಯವಸ್ಥೆ ಮಾಡಲಾಗಿದೆ.-ಡಾ. ಆರ್.ವಿ. ನಾಯಕ, ಟಿಎಚ್ಒ ಸುರಪುರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.