ಶಹಾಪುರ: ತಾಲ್ಲೂಕಿನ ಹೋಬಳಿ ಗ್ರಾಮವಾಗಿರುವ ಶಿರವಾಳದಲ್ಲಿ ಕನಿಷ್ಟ ಸೌಲಭ್ಯವಿಲ್ಲದೆ ಜನ ಪರದಾಡುವಂತೆ ಆಗಿದೆ. ಸಾಕಷ್ಟು ಅನುದಾನದ ಲಭ್ಯವಿದ್ದರೂ ಸಮರ್ಪಕ ನಿರ್ವಹಣೆಯ ಸಮಸ್ಯೆಯಿಂದ ಜನ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
ಗ್ರಾಮದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಒಳ ರಸ್ತೆಗಳು ಹಾಳಾಗಿ ಹೋಗಿವೆ. ಕೆಲ ಕಡೆ ಹೂಳು ತುಂಬಿದ ಚರಂಡಿಯನ್ನು ಸ್ವಚ್ಛ ಮಾಡುತ್ತಿಲ್ಲ. ಅನಿವಾರ್ಯವಾಗಿ ನಮ್ಮ ಮನೆಯ ಮುಂದಿನ ಚರಂಡಿಯನ್ನು ನಾವೇ ಸ್ವಚ್ಛ ಮಾಡಿಕೊಳ್ಳುವ ದುಸ್ಥಿತಿ ಬಂದಿದೆ.
ಗ್ರಾಮದಲ್ಲಿ ಹಲವು ವರ್ಷದಿಂದ ಕುಡಿಯುವ ನೀರಿನ ಸಮಸ್ಯೆ ತಾಂಡಾವಾಡುತ್ತಿದೆ. ಕೂಗಳತೆಯ ದೂರದಲ್ಲಿ ಭೀಮಾ ನದಿ ಹರಿಯುತ್ತಿದ್ದರೂ ಕುಡಿಯುವ ನೀರಿಗಾಗಿ ಪರದಾಡುವಂತೆ ಆಗಿದೆ. ಜೆಜೆಎಂ ಕೆಲಸ ನಿರ್ವಹಿಸಿದ್ದಾರೆ. ಹನಿ ನೀರು ಇಂದಿಗೂ ಬಂದಿಲ್ಲ ಎನ್ನುತ್ತಾರೆ ಗ್ರಾಮದ ನಿವಾಸಿಗರು.
ಜಿಲ್ಲಾ ಉಸ್ತುವಾರಿ ಸಚಿವರು ಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಒದಗಿಸಿದ್ದಾರೆ. ಆದರೆ ಶಿರವಾಳ ಗ್ರಾಮಕ್ಕೆ ಹೆಚ್ಚಿನ ಅನುದಾನ ನೀಡಿಲ್ಲ. ಅಲ್ಲದೇ ಗ್ರಾಮಕ್ಕೂ ಭೇಟಿ ನೀಡುತ್ತಿಲ್ಲ. ಮೇಲಧಿಕಾರಿಗಳಿಗೆ ದೂರು ನೀಡಿ ಕೈ ಸೋತು ಹೋಗಿವೆ. ಆದರೆ ಸಾರ್ವಜನಿಕ ಕೆಲಸವಾಗುತ್ತಿಲ್ಲ ಎಂದು ಆರೋಪಿಸುತ್ತಾರೆ ನಬಿಸಾಬ್ ಶಿರವಾಳ.
ಮಳೆಗಾಲದಿಂದ ಬಡಾವಣೆಯ ತಗ್ಗು ಪ್ರದೇಶದಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆನೂರಪಾಶಾ ಗ್ರಾಮದ ನಿವಾಸಿ
ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲ. ಒಳಚರಂಡಿ ಹಾಗೂ ರಸ್ತೆ ನಿರ್ಮಿಸಲು ಪ್ರಸ್ತಾವ ಸಲ್ಲಿಸಿದೆ. ಕುಡಿಯುವ ನೀರಿನ ಸಮಸ್ಯೆ ಸದ್ಯಕ್ಕೆ ಬಗೆಹರಿಸಿದೆ.ಮಡಿವಾಳಪ್ಪ ಪಿಡಿಒ ಶಿರವಾಳ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.