ADVERTISEMENT

ಯಾದಗಿರಿ: ಐಸೋಲೇಶನ್ ವಾರ್ಡ್‌ಗೆ ವ್ಯಕ್ತಿ ದಾಖಲು

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 15:51 IST
Last Updated 17 ಮಾರ್ಚ್ 2020, 15:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಯಾದಗಿರಿ: ಉಸಿರಾಟದ ತೊಂದರೆಯಿಂದ ಬಳಲುತ್ತಿರುವ 43 ವರ್ಷದ ವ್ಯಕ್ತಿಯೊಬ್ಬರನ್ನು ಜಿಲ್ಲಾಸ್ಪತ್ರೆ ದಾಖಲಿಸುತ್ತಿದ್ದಂತೆ ‘ಐಸೋಲೆಷನ್ ವಾರ್ಡ್’ಗೆ ವೈದ್ಯರು ಸ್ಥಳಾಂತರಿಸಿದ್ದಾರೆ.

ಕಳೆದ ಒಂದು ವಾರದಿಂದ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಐಸೋಲೇಶನ್ ವಾರ್ಡ್‌ಗೆ ದಾಖಲು ಮಾಡಲಾಗಿದೆ. ಕಳೆದ ನಾಲ್ಕು ದಿನಗಳಿಂದ ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುಮಠಕಲ್ ತಾಲ್ಲೂಕಿನ ಚಿಂತನಹಳ್ಳಿ ಗ್ರಾಮದವರು ಚಿಕಿತ್ಸೆ ಪಡೆಯುತ್ತಿದ್ದರು. ಸ್ವ್ಯಾಬ್ ಪಡೆದು ಕಲಬುರ್ಗಿ ಪ್ರಯೋಗಾಲಯಕ್ಕೆ ವೈದ್ಯರು ಕಳುಹಿಸಿದ್ದಾರೆ. ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿರುವ ಕೊರೊನಾ ವಿಶೇಷ ವಾರ್ಡ್‌ಗೆ ಮೊದಲ ವ್ಯಕ್ತಿ ದಾಖಲಾಗಿದ್ದಾರೆ.

‘ಗುರುಮಠಕಲ್‌ ತಾಲ್ಲೂಕಿನ ಚಿಂತನಹಳ್ಳಿ ಗ್ರಾಮದ ಈ ವ್ಯಕ್ತಿ ವಿದೇಶದಿಂದ ವಾಪಸ್ ಆದವರಲ್ಲ ಹಾಗೂ ಕೊರೊನಾ ಶಂಕಿತರೂ ಅಲ್ಲ. ತೀವ್ರ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಇವರನ್ನು ಮುಂಜಾಗೃತ ಕ್ರಮವಾಗಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ವ್ಯಾಬ್ ಟೆಸ್ಟ್ ತೆಗೆದುಕೊಂಡು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಡಿಎಚ್‌ಒ ಡಾ.ಎಂ.ಎಸ್‌.ಪಾಟೀಲ ತಿಳಿಸಿದ್ದಾರೆ.

ADVERTISEMENT

‘ಐಸೋಲೇಶನ್ ವಾರ್ಡ್‌ನಲ್ಲಿ ದಾಖಲಾಗಿರುವ ವ್ಯಕ್ತಿ ಕೊರೊನಾ ಸೋಂಕು ಶಂಕಿತ ವ್ಯಕ್ತಿಯಲ್ಲ. ಕಳೆದ ನಾಲ್ಕು ದಿನಗಳಿಂದ ಅವರಿಗೆ ಹೆಚ್ಚು ದಮ್ಮು ಇರುವ ಕಾರಣ ವಾರ್ಡ್‌ನಲ್ಲಿ ದಾಖಲಿಸಕೊಳ್ಳಲಾಗಿದೆ’ ಎಂದು ಜಿಲ್ಲಾಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.