ಪೋಕ್ಸೊ
(ಪ್ರಾತಿನಿಧಿಕ ಚಿತ್ರ)
ಯಾದಗಿರಿ: ಬಾಲಕಿಯರ ಮದುವೆಯಾಗಿ, ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಐವರ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೊ ಪ್ರಕರಣಗಳು ದಾಖಲಾಗಿವೆ.
ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಗೆ 13 ವರ್ಷವಿದ್ದಾಗಲೇ ಮದುವೆ ಮಾಡಿದ್ದರು. 2023ರ ಜುಲೈನಲ್ಲಿ ಹೆಣ್ಣು ಶಿಶು, ಇದೇ ತಿಂಗಳ 7ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಬಾಲಕಿಯ ಪತಿ, ಆಕೆಯ ತಾಯಿ, ತಂದೆ ಮತ್ತು ಅತ್ತೆಯ ವಿರುದ್ಧ ಪ್ರಕರಣ ದಾಖಲಾಗಿದೆ.
ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಗೆ ಬೆದರಿಸಿ ದೇವರ ಫೋಟೊ ಮುಂದೆ ಆಕೆಗೆ ತಾಳಿ ಕಟ್ಟಿ ಮದುವೆಯಾಗಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದ ಆರೋಪದಡಿ ಪತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.