
ಪ್ರಜಾವಾಣಿ ವಾರ್ತೆ
ಲೈಂಗಿಕ ದೌರ್ಜನ್ಯ
ಗುರುಮಠಕಲ್: ಬಾಲಕಿಯನ್ನು ಪ್ರೀತಿಸಿ ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರಪುರ ತಾಲ್ಲೂಕಿನ ಕೆಂಭಾವಿ ನಿವಾಸಿ ಮುತ್ತುರಾಜ ಗೋವಿಂದ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುಮಠಕಲ್ ತಾಲ್ಲೂಕಿನ ಗ್ರಾಮವೊಂದರ 15 ವರ್ಷದ ಬಾಲಕಿಯೊಂದಿಗೆ ಮುತ್ತುರಾಜ, ಒಂದು ವರ್ಷದಿಂದ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆರೋಪಿಯು ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು, ಕೆಂಭಾವಿಯ ತನ್ನ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.