ADVERTISEMENT

9ನೇ ತರಗತಿ ವಿದ್ಯಾರ್ಥಿನಿ ಶಿಶುವಿಗೆ‌ ಜನ್ಮ ನೀಡಿದ್ದ ಪ್ರಕರಣ: ಯುವಕನ ಬಂಧನ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 4:19 IST
Last Updated 30 ಆಗಸ್ಟ್ 2025, 4:19 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಶಹಾಪುರ (ಯಾದಗಿರಿ ಜಿಲ್ಲೆ): ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಶಿಶುವಿಗೆ‌ ಜನ್ಮನೀಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ADVERTISEMENT

ಸುರಪುರ ತಾಲ್ಲೂಕಿನ ಗ್ರಾಮವೊಂದರ ನಿವಾಸಿ ಪರಮಣ್ಣ ವಾರಿ (28) ಬಂಧಿತ. ಆತನ ವಿರುದ್ಧ ಪ್ರಕರಣವನ್ನೂ ದಾಖಲಿಸಿಕೊಂಡು ತನಿಖೆ ಮಾಡಲಾಗುವುದು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪರಮಣ್ಣ, ಬಾಲಕಿಯ ಸಹೋದರ, ವಸತಿ ಶಾಲೆಯ ಪ್ರಾಂಶುಪಾಲರು, ವಾರ್ಡನ್‌ ಹಾಗೂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಸ್ಟಾಫ್ ನರ್ಸ್ ಕಾವೇರಮ್ಮ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ಬಾಲಕಿಯ ಗ್ರಾಮಸ್ಥನಾದ ಪರಮಣ್ಣ, ಟಂಟಂ ಚಾಲನೆ ಮಾಡುತ್ತಿದ್ದ. ಆತನಿಗೆ ಮದುವೆಯಾಗಿ ಒಂದು
ಮಗು ಇದೆ. ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಬಾಯಿ ಬಿಡದಂತೆಯೂ ಆಕೆಗೆ ತಾಕೀತು ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.