ಶಹಾಪುರ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ ವಸತಿರಹಿತ (ಕಚ್ಚಾ ಮನೆ ಹೊಂದಿರುವ) ಹಾಗೂ ನಿವೇಶನ ರಹಿತ ಕುಟುಂಬಳಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ ಎಂದು ಪೌರಾಯಕ್ತ ಜೀವನಕುಮಾರ ಕಟ್ಟಿಮನಿ ತಿಳಿಸಿದ್ದಾರೆ.
ವಸತಿರಹಿತವಾಗಿ ಸೂರು ವಂಚಿತ ಜನತೆಗೆ ನಿವೇಶನ ಸೌಲಭ್ಯ ನೀಡುವ ಉದ್ದೇಶದಿಂದ ನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ಬೆಳಿಗ್ಗೆ ಕಸ ವಿಲೇವಾರಿ ವಾಹನದಲ್ಲಿ ಧ್ವನಿ ವರ್ಧಕದ ಮೂಲಕ ವ್ಯಾಪಕ ಪ್ರಚಾರ ನಡೆಸಿದೆ. ಮಧ್ಯವರ್ತಿಗಳಿಗೆ ಅವಕಾಶವಿಲ್ಲ. ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾನುವಾರದ ವರೆಗೆ 794 ಅರ್ಜಿಗಳು ಬಂದಿವೆ ಎಂದು ಅವರು ಮಾಹಿತಿ ನೀಡಿದರು.
ಇನ್ನೂ ಅರ್ಜಿ ಸಲ್ಲಿಸಲು ಕೊನೆ ದಿನ ಜು.15 ಆಗಿದೆ. ಆಸಕ್ತರು ಅಗತ್ಯ ದಾಖಲೆಗಳಿಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಗರದ ಆಶ್ರಯ ಶಾಖೆಗೆ ಭೇಟಿ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ನಗರ ಆಶ್ರಯ ಸಮಿತಿ ಅಧ್ಯಕ್ಷ ವಸಂತ ಸುರಪುರಕರ್ ಹಾಗೂ ಆಶ್ರಯ ಶಾಖೆಯ ಸಿಬ್ಬಂದಿ ಭಾಗವಹಿಸಿದ್ದರು.
Quote - ಪ್ರಧಾನ ಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ ವಸತಿರಹಿತ ಹಾಗೂ ನಿವೇಶನ ರಹಿತ ಕುಟುಂಬಳಿಗೆ ನೇರವಾಗಿ ಆಲ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಜನತೆ ನೇರವಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಜೀವನಕುಮಾರ ಕಟ್ಟಿಮನಿ ಪೌರಾಯುಕ್ತ ಶಹಾಪುರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.