ADVERTISEMENT

ಪ್ರಜಾವಾಣಿ ವರದಿ ಫಲಶ್ರುತಿ: ಕುಡಿಯುವ ನೀರಿನ ಘಟಕ ಆರಂಭ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 3:43 IST
Last Updated 25 ಜೂನ್ 2021, 3:43 IST
ಶಹಾಪುರ ತಾಲ್ಲೂಕಿನ ಗೌಡೂರ ಗ್ರಾಮದಲ್ಲಿ ಗುರುವಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಪಡೆದುಕೊಳ್ಳುತ್ತಿರುವ ಗ್ರಾಮಸ್ಥರು
ಶಹಾಪುರ ತಾಲ್ಲೂಕಿನ ಗೌಡೂರ ಗ್ರಾಮದಲ್ಲಿ ಗುರುವಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಪಡೆದುಕೊಳ್ಳುತ್ತಿರುವ ಗ್ರಾಮಸ್ಥರು   

ಗೌಡೂರ (ಶಹಾಪುರ): ಗ್ರಾಮದಲ್ಲಿ ಮೂರು ತಿಂಗಳ ಹಿಂದೆ ಹಾಳಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಗುರುವಾರದಿಂದ ಮತ್ತೆ ಆರಂಭವಾಯಿತು. ಗ್ರಾಮದ ಜನತೆ ಬೆಳಿಗ್ಗೆಯಿಂದಲೇ ನೀರು ಪಡೆದುಕೊಂಡು ತೆರಳುತ್ತಿರುವುದು ಸಾಮಾನ್ಯವಾಗಿತ್ತು.

ಗ್ರಾಮದ ಸುತ್ತಮುತ್ತಲು ಉಪ್ಪಿನಾಂಶ ಇರುವ ನೀರು ಇರುವುದರಿಂದ ಕುಡಿಯಲು ಯೋಗ್ಯವಾಗಿಲ್ಲದ ಕಾರಣ ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ಅಲ್ಲಿನ ನಿವಾಸಿಗರು ಅವಲಂಬಿತರಾಗಿದ್ದರು. ಘಟಕ ಸ್ಥಗಿತಗೊಂಡಿದ್ದರಿಂದ ಗ್ರಾಮಸ್ಥರು ಗ್ರಾಮದಿಂದ ಎರಡು ಕಿ.ಮೀ ದೂರದ ಕೃಷ್ಣಾ ನದಿಗೆ ತೆರಳಿ ಅಲ್ಲಿ ಒರತೆ ತೆಗೆದು ಕುಡಿಯುವ ನೀರು ಸಂಗ್ರಹಿಸಿಕೊಂಡು ಬರುತ್ತಿದ್ದರು. ಮಳೆಗಾಲ ಆರಂಭವಾಗಿದ್ದರಿಂದ ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗದ ಭೀತಿಯನ್ನು ಗ್ರಾಮಸ್ಥರು ಎದುರಿಸುವಂತೆ ಆಗಿತ್ತು.

ಸೋಮವಾರ ‘ಪ್ರಜಾವಾಣಿ'ಯಲ್ಲಿ ‘ಗೌಡೂರ: ಕೃಷ್ಣಾ ನದಿಯ ಒರತೆ ನೀರೆ ಗತಿ' ಎನ್ನುವ ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.