ADVERTISEMENT

ಯರಗೋಳ| ಪ್ರತಿಭಾ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ: ಬಿಇಒ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 8:10 IST
Last Updated 7 ಡಿಸೆಂಬರ್ 2025, 8:10 IST
ಯರಗೋಳ ವ್ಯಾಪ್ತಿಯ ಬಂದಳ್ಳಿ ಸಹಾಜ್ ಕಿಡ್ಸ್ ಅಕಾಡೆಮಿ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸಹಾಜ್ ಕಿಡ್ಸ್ ಅಕಾಡೆಮಿಯ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳು
ಯರಗೋಳ ವ್ಯಾಪ್ತಿಯ ಬಂದಳ್ಳಿ ಸಹಾಜ್ ಕಿಡ್ಸ್ ಅಕಾಡೆಮಿ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸಹಾಜ್ ಕಿಡ್ಸ್ ಅಕಾಡೆಮಿಯ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳು   

ಬಂದಳ್ಳಿ (ಯರಗೋಳ): ‘ಪ್ರತಿ ಮಕ್ಕಳಲ್ಲಿ ಒಂದು ವಿಶೇಷ ಪ್ರತಿಭೆ ಇರುತ್ತದೆ. ಅದರ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೀರಪ್ಪ ಕನ್ನಳ್ಳಿ ಹೇಳಿದರು.

ಗ್ರಾಮದ ಸಹಾಜ್ ಕಿಡ್ಸ್ ಅಕಾಡೆಮಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಕಲಿಕೆ ಎಂದರೆ ಕೇವಲ ಅಂಕ ಗಳಿಕೆ ಅಲ್ಲ, ಕಲಿಕೆ ಜೊತೆ ವಿವಿಧ ಚಟುವಟಿಕೆ ಮೂಲಕ ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಅನುಕೂಲ’ ಎಂದರು.

ಶಾಲೆಯ ಅಧ್ಯಕ್ಷ ಸುಭಾಷ್ ಚಂದ್ರ ಬಡಿಗೇರ್ ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಾಸಕ್ಕೆ ಪ್ರತಿಭಾ ಕಾರಂಜಿ ಸಹಕಾರಿ’ ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ವಲಯ ಶಿಕ್ಷಣ ಸಂಯೋಜಕ ದೇವೇಂದ್ರಪ್ಪ ಈಟೆ, ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣಾರೆಡ್ಡಿ.ಸಿ, ಶರಣಬಸಪ್ಪ ಪಾಕರೆಡ್ಡಿ.ಬಿ, ಮುಖ್ಯ ಶಿಕ್ಷಕಿ ಶಶಿಕಲಾ ಬಡಿಗೇರ್ ಇದ್ದರು.
ವಿವಿಧ ಸಂಸ್ಕೃತಿ, ನೃತ್ಯ, ರಸ ಪ್ರಶ್ನೆ ಕಾರ್ಯಕ್ರಮಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.