ADVERTISEMENT

ಕೋವಿಡ್ ಆಸ್ಪತ್ರೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 26 ಮೇ 2020, 1:04 IST
Last Updated 26 ಮೇ 2020, 1:04 IST
ಶಹಾಪುರ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಪರಿಶಿಷ್ಟ ಜಾತಿ ವಸತಿ ನಿಲಯಕ್ಕೆ ಸೋಮವಾರ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು
ಶಹಾಪುರ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಪರಿಶಿಷ್ಟ ಜಾತಿ ವಸತಿ ನಿಲಯಕ್ಕೆ ಸೋಮವಾರ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು   

ಶಹಾಪುರ: ದಿನೇ ದಿನೇ ಕೊರೊನಾ ಪ್ರಕರಣಗಳು ಅಧಿಕಗೊಳ್ಳುತ್ತಿದ್ದಂತೆ ಜಿಲ್ಲಾಡಳಿತವು ಎಚ್ಚರಗೊಂಡಿದೆ. ಬರುವ ದಿನಗಳಲ್ಲಿ ಕೋವಿಡ್ ನಿಗದಿತ ಆಸ್ಪತ್ರೆ ಸ್ಥಾಪಿಸುವ ಸಲುವಾಗಿ ಸೋಮವಾರ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ಭೇಟಿ ನೀಡಿ ವಿವಿಧ ಸ್ಥಳಗಳನ್ನು ಪರಿಶೀಲಿಸಿ ಅಗತ್ಯ ಸೌಲಭ್ಯಗಳನ್ನು ಸಿದ್ಧಪಡಿಸುವಂತೆ ಸೂಚಿಸಿದ್ದಾರೆ ಎಂದು ತಹಶೀಲ್ದಾರ್ ಜಗನಾಥರಡ್ಡಿ ತಿಳಿಸಿದ್ದಾರೆ.

ನಗರದ ಬಾಪುಗೌಡ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ನಿರ್ಮಿಸಿರುವ ಪರಿಶಿಷ್ಟ ಜಾತಿ ವಸತಿ ನಿಲಯವು ಇನ್ನೂ ಉದ್ಘಾಟನೆಗೊಂಡಿಲ್ಲ. ಇಲ್ಲಿ 20 ಕೋಣೆಗಳಿವೆ. ಬರುವ ದಿನದಲ್ಲಿ ಕೋವಿಡ್ ಆಸ್ಪತ್ರೆಗಾಗಿ ತೆಗೆದುಕೊಳ್ಳುವುದು. ಅಲ್ಲದೆ ಪ್ರತಿ ಕೋಣೆಯಲ್ಲಿ ಎರಡು ಬೆಡ್ ಹಾಗೂ ಕಾಟಾ ಹಾಕಿ ಸಿದ್ಧಪಡಿಸುವಂತೆ ಸ್ಥಳದಲ್ಲಿ ಇದ್ದ ಸಮಾಜ ಕಲ್ಯಾಣ ಅಧಿಕಾರಿಗೆ ಜಿಲ್ಲಾಧಿಕಾರಿಯು ಸೂಚಿಸಿದರು.

ಅದರಂತೆ ತಾಲ್ಲೂಕಿನ ಹೋತಪೇಟದ ನವೋದಯ ಮಹಾ ವಿದ್ಯಾಲಯಕ್ಕೆ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು. ನಂತರ ಕನ್ಯಾಕೊಳ್ಳುರ ರಸ್ತೆಯಲ್ಲಿರುವ ಬಿಸಿಎಂ ವಸತಿನಿಲಯಕ್ಕೆ ಭೇಟಿ ನೀಡಿ ಅಲ್ಲಿಯೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸ್ಥಳದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ತಹಶೀಲ್ದಾರ್ ಜಗನಾಥರಡ್ಡಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ರಮೇಶ ಗುತ್ತೇದಾರ, ಪೌರಾಯುಕ್ತ ಬಸವರಾಜ ಶಿವಪೂಜೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.