ಶಹಾಪುರ: ಉತ್ತರ ಪ್ರದೇಶದಲ್ಲಿ ಯುವತಿ ಮೇಲೆ ಅತ್ಯಾಚಾರ ಮಾಡಿ, ಹತ್ಯೆ ಮಾಡಿದ ದುರುಳರನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಸಂಘಟನೆಯ ಮುಖಂಡರು ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಸ್ವಾತಂತ್ರ್ಯ ಬಂದು 70 ವರ್ಷ ಕಳೆದರು ಇಂದಿಗೂ ಹಿಂದುಳಿದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಲಿದೆ. ಅದರಲ್ಲಿ ಉತ್ತರ ಪ್ರದೇಶದಲ್ಲಿ ಹಿಂದುಳಿದ ಸಮುದಾಯ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ. ಕಾನೂನು ರಕ್ಷಣೆ ಮಾಡಬೇಕಾದ ಅಧಿಕಾರಿಗಳು ಯಾವುದೋ ಪ್ರಭಾವಕ್ಕೆ ಒಳಗಾಗಿ ತಮ್ಮ ಕರ್ತವ್ಯವನ್ನು ಮರೆತು ಬಿಟ್ಟಿದ್ದಾರೆ ಎಂದು ಸಂಘಟನೆಯ ಮುಖಂಡರು ಆರೋಪಿಸಿದರು.
ಸಂಘಟನೆಯ ಮುಖಂಡರಾದ ಈರಣ್ಣ ಕಸನ್, ಶರಣು ದೋರನಹಳ್ಳಿ, ವಿಶ್ವನಾಥ ವಿಭೂತಿಹಳ್ಳಿ, ಮಾನಪ್ಪ, ಶಿವಕುಮಾರ ಪೋತೆ, ಬಲಭೀಮ, ಮಲ್ಲಿಕಾರ್ಜುನ, ವಿರೇಶ ಕೊಂಕಲ್, ಶೇಖರ ಬಡಿಗೇರ, ಅರುಣಕುಮಾರ, ಮಂಜುನಾಥ, ರಾಜಕುಮಾರ, ಸಾಬಣ್ಣ ಹಯ್ಯಾಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.