ಯಾದಗಿರಿ: ವಕ್ಫ್ ತಿದ್ದುಪಡಿ ಮಸೂದೆ ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ಗುರುವಾರ (ಏ.17) ರಂದು ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಜಂಟಿ ಕ್ರಿಯಾ ಸಮಿತಿ ಕಾರ್ಯಾಧ್ಯಕ್ಷ ವಹೀದ್‌ಮಿಯಾ ತಿಳಿಸಿದರು.
ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂ ಸಮುದಾಯದ ವಕ್ಫ್ ಆಸ್ತಿ ಕಬಳಿಸಲು ಕೇಂದ್ರ ಸರ್ಕಾರ ಮಾಡಿದ ಇದೊಂದು ಕುತಂತ್ರವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜಿಲಾನಿಸಾಬ್ ಅಪಘಾನ, ಅಲಹಜ್ ಗುಲಾಮ ಮಹಿಬೂಬಸಾಬ್, ಎಸ್.ಮುಫ್ತಿ ಮುನೀರ್, ಅಹಮದಸಾಬ್, ಸ್ವಾಲೆ ಅಲ್‌ಹಾಜರಿ, ಮನಸೂರ್ ಅಪಘಾನ್, ಇರ್ಫಾನ್ ಬಾದಲ್, ಡಾ.ರಫೀಕ್ ಸೌದಾಗರ, ಜಿ.ಹಫೀಜ್ ಪಟೇಲ್, ಖಾಜಿ ಇಂತಿಯಾಜುದ್ದೀನ್, ಅಬ್ದುಲ್ ರಜಾಕ್ ಸದ್ದಾಂ ಹುಸೇನ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.