ಯಾದಗಿರಿ: ಜಿಲ್ಲೆಯ ಅಲೆಮಾರಿ, ಅರೆ ಅಲೆಮಾರಿ, ಗೊಲ್ಲ ಸಮುದಾಯದವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಅಖಲಿ ಭಾರತ ಯಾದವ ಯುವ ಮಹಾಸಭಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ವಡಗೇರಾ ತಾಲ್ಲೂಕಿನ ಕಾಡಂಗೇರಾ (ಬಿ) ಗ್ರಾಮದಲ್ಲಿ ವಾಸಿಸುತ್ತಿರುವ ಅಲೆಮಾರಿ ಗೊಲ್ಲ ಸಮುದಾಯದವರಿಗೆ ಹಕ್ಕುಪತ್ರ ವಿತರಸಬೇಕು ಎಂದು ಅವರು ಆಗ್ರಹಿಸಿದರು.
ಶಹಾಪುರ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸಮುದಾಯದ ಜನರ ಆಶೋತ್ತರಗಳಿಗೆ ಸ್ಪಂದಿಸದೇ ರಾಜಕೀಯ ಮಾಡುತ್ತಿದ್ದಾರೆ. ಅವರನ್ನು ಅಮಾನತುಗೊಳಿಸಬೇಕು. ಕೂಡಲೇ ಸಮುದಾಯದ ಜಿಲ್ಲಾಮಟ್ಟದ ಸಭೆ ಕರೆಯಬೇಕು. ಜಿಲ್ಲೆಯಲ್ಲಿ ಅಲೆಮಾರಿ ಜನಾಂಗದ ಮಕ್ಕಳ ವಸತಿ ಶಾಲೆ ಆರಂಭಿಸಬೇಕು. ಸಮುದಾಯದ ಜನರು ವಾಸಿಸುವ ಕಾಲೊನಿಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.