ADVERTISEMENT

ಶೋಷಿತರ ಸಂಘಟನೆಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 14:31 IST
Last Updated 6 ಜೂನ್ 2025, 14:31 IST
ಸುರಪುರದ ಗಾಂಧಿವೃತ್ತದಲ್ಲಿ ಶೋಷಿತ ಪರ ಸಂಘಟನೆ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿದರು
ಸುರಪುರದ ಗಾಂಧಿವೃತ್ತದಲ್ಲಿ ಶೋಷಿತ ಪರ ಸಂಘಟನೆ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿದರು   

ಸುರಪುರ: ತಾಲ್ಲೂಕಿನ ವಾಗಣಗೇರಾ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಶೋಷಿತ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಮುಖಂಡರು ಶುಕ್ರವಾರ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಒಕ್ಕೂಟದ ರಾಜ್ಯ ಸಮಿತಿ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ಆನ್‍ಲೈನ್ ಮೂಲಕ ಮನೆಗಳನ್ನು ಮಂಜೂರು ಮಾಡುವ ಅವಕಾಶ ಇದೆ. ಆದರೆ ಪಂಚಾಯಿತಿ ಅಧಿಕಾರಿ ಹಣದ ಬೇಡಿಕೆ ಇಟ್ಟು ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ನರೇಗಾ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ನಿಜವಾದ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ ಆಗುತ್ತಿಲ್ಲ ಗುಳೆ ಸಮಸ್ಯೆ ಹೆಚ್ಚಾಗಿದೆ. ಬೋಗಸ್ ಬಿಲ್ ಎತ್ತಲಾಗುತ್ತಿದೆ’ ಎಂದು ದೂರಿದರು.

ADVERTISEMENT

ಉಸ್ತಾದ ವಜಾಹತ್ ಹುಸೇನ್ ಮಾತನಾಡಿ, ‘ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಸಂಬಂಧಿಸಿದ ಅಧಿಕಾರಿಗಳು ಸುಮ್ಮನೆ ಕುಳಿತಿದ್ದಾರೆ. ಇದರಿಂದ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಪರಿಸ್ಥಿತಿ ಸರಿಪಡಿಸದಿದ್ದರೆ ಸುರಪುರ ಬಂದ್ ಮಾಡಿ ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಸಿದರು.

ತಾಲ್ಲೂಕು ಪಂಚಾಯಿತಿ ಅಧಿಕಾರಿ ಎನ್. ವಿ. ಜೋಷಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ತಾಲ್ಲೂಕು ಸಮಿತಿ ಅಧ್ಯಕ್ಷ ನಾಗರಾಜ ದರಬಾರಿ, ವೆಂಕಟೇಶ ಡಿ.ಸಿ., ಬಾಬು ಅರಿಸಿಣಗಿ, ದೇವಪ್ಪ ರತ್ತಾಳ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.