ADVERTISEMENT

ಭೂ ಸುಧಾರಣೆ ಕಾಯ್ದೆ ವಾಪಸ್‌ಗೆ ಆಗ್ರಹಿಸಿ ಪ್ರತಿಭಟನೆ

ರೈತರ ಜಮೀನು ಬಂಡವಾಳಶಾಹಿಗಳ ಪಾಲು: ಕಳವಳ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 16:28 IST
Last Updated 19 ಜೂನ್ 2020, 16:28 IST
ಯಾದಗಿರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು
ಯಾದಗಿರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು   

ಯಾದಗಿರಿ: ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ (1961 ಕಲಂ 79 ಎಬಿಸಿ ಮತ್ತು 80) ರದ್ದುಪಡಿಸಬಾರದು, ಬಗರ್‌ ಹುಕುಂ ಸಾಗುವಳಿದಾರರಿಗೆ ಪಟ್ಟಾ, ಪಹಣಿ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ಪದಾಧಿಕಾರಿಗಳು ಈಚೆಗೆ ನಗರದ ನೇತಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ ಮಾತನಾಡಿ, ‘ಒಂದು ವೇಳೆ ಈ ಕಾಯ್ದೆ ಜಾರಿಯಾದರೆ ಸಣ್ಣ ಹಿಡುವಳಿ ರೈತರ ಜಮೀನು ಬಂಡವಾಳಶಾಹಿಗಳ ಪಾಲಾಗುತ್ತದೆ. ಇದರಿಂದ ರೈತಾಪಿ ವರ್ಗ ಬೀದಿಗೆ ಬರುತ್ತದೆ. ಭೂಸುಧಾರಣೆ ಕಾಯ್ದೆ ರದ್ದು ಮಾಡಬಾರದು’ ಎಂದರು.

‘ಗ್ರಾಮೀಣ ಭಾಗದಲ್ಲಿ ಬಗರ್ ಹುಕುಂ ಸಾಗುವಳಿ ರೈತರಿಗೆ ಸರ್ಕಾರ ಪಟ್ಟಾ,ಪಹಣಿ ವಿತರಿಸಬೇಕು’ ಎಂದರು. ಮಹಿಳಾ ಘಟಕದ ಕಾರ್ಯದರ್ಶಿ ನಾಗರತ್ನಾ ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಶರಣಗೌಡ ಮದ್ರಕಿ, ಸಿದ್ದಣ್ಣ ಮೇಟಿ, ಚಂದ್ರಕಲಾ ವಡಗೇರಿ, ಮುದ್ದಣ್ಣ ಅಮ್ಮಾಪುರ, ಸಿದ್ದು, ಮಲ್ಕಣ್ಣ‌, ಶಹಾಪುರ, ಚನ್ನಾಮಲ್ಲಿಕಾರ್ಜುನ, ವೀರಸಂಗಪ್ಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.