ADVERTISEMENT

ಅಭಿವೃದ್ಧಿಯಲ್ಲಿ ತಾರತಮ್ಯ; ಆರೋಪ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 6:37 IST
Last Updated 14 ಜನವರಿ 2022, 6:37 IST
ಹುಣಸಗಿ ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ಮನವಿ ಸಲ್ಲಿಸಿದರು
ಹುಣಸಗಿ ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ಮನವಿ ಸಲ್ಲಿಸಿದರು   

ಹುಣಸಗಿ: ತಾಲ್ಲೂಕಿನ ಕೆಲ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ವಸತಿ ಯೋಜನೆಗಳ ಹಂಚಿಕೆ ಹಾಗೂ ಕಾಮಗಾರಿಗಳ ಜಾರಿಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಕೆಲವು ಗ್ರಾಮ ಪಂಚಾಯಿತಿಗಳ ಕಾಂಗ್ರೆಸ್ ಬೆಂಬಲಿತ ಸದಸ್ಯರು ಆರೋಪಿಸಿದರು.

ಗುರುವಾರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಗೆ ಆಗಮಿಸಿ, ತಾ.ಪಂ ಇಒ ಅವರಿಗೆ ಮನವಿ ಸಲ್ಲಿಸಿದರು.

ಅಂಬೇಡ್ಕರ್ ವಸತಿ ಹಾಗೂ ಬಸವ ವಸತಿ ಯೋಜನೆಯಡಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಬಡವರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಗ್ರಾಮಸಭೆ ನಡಸದೆ ತಮಗೆ ಬೇಕಾದವರನ್ನು ಫಲಾನುಭಗಳನ್ನಾಗಿ ಆಯ್ಕೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ADVERTISEMENT

ಗ್ರಾಮ ಪಂಚಾಯಿತಿ ನಿಯಮವಳಿ ಪ್ರಕಾರ ಗ್ರಾಮಸಭೆ ನಡೆಸಿ ಫಲಾನುಭವಿಗಳ ಆಯ್ಕೆ ಮಾಡುವಂತೆ ಒತ್ತಾಯಿಸಿದರು.

ಪಂಚಾಯಿತಿ ಮಟ್ಟದಲ್ಲಿ ಪ್ರತಿಯೊಂದು ಅನುದಾನ ಹಾಗೂ ಕಾಮಗಾರಿ ಬಗ್ಗೆ ಅಭಿವೃದ್ಧಿ ಅಧಿಕಾರಿಗಳು ಕೂಡ ಸದಸ್ಯರ ಗಮನಕ್ಕೆ ತರುತ್ತಿಲ್ಲ. ಅಧಿಕಾರಿಗಳು ಸಹ ಏಕಪಕ್ಷಿಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಪ್ರತಿಯೊಂದು ಕ್ರಿಯಾ ಯೋಜನೆ ಹಾಗೂ ವಸತಿ ಯೋಜನೆಗಳು ಗಮನಕ್ಕೆ ತಂದು ಮಂಜೂರಾತಿ ಕೊಡಬೇಕು. ಇದೇ ಸ್ಥಿತಿ ಮುಂದುವರಿದರೆ ಎಲ್ಲರೂ ಸೇರಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಬಂಜಾರ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷ ನಿಂಗಾನಾಯ್ಕ ರಾಠೋಡ, ರಾಮುನಾಯ್ಕ ರಾಠೋಡ, ಗ್ರಾ.ಪಂ ಸದಸ್ಯರಾದ ತಾರನಾಥ ಚವ್ಹಾಣ, ಸಂತೋಷ ರಾಠೋಡ, ಬಾಲಚಂದ್ರ ರಾಠೋಡ, ನಾರಾಯಣಾಯ್ಕ, ಗುಂಡುರಾವ ಜಾಧವ, ಶರಣಗೌಡ, ರಶ್ಮಿ ಶಾಂತಿಲಾಲ, ತಾರಬಾಯಿ ಪವಾರ್, ಕಾಂಗ್ರೆಸ್ ಮುಖಂಡ ಸುಭಾಷ ಕೋಳಿಹಾಳ, ವಾಸುದೇವ ಲಮಾಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.