ADVERTISEMENT

ಸುರಪುರ: ಹಸನಾಪುರ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ

ಉದ್ಯೋಗ ಖಾತ್ರಿ: ತನಿಖೆಯಾಗಲಿ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2021, 5:12 IST
Last Updated 16 ಡಿಸೆಂಬರ್ 2021, 5:12 IST
ಸುರಪುರದ ಹಸನಾಪುರ ವೃತ್ತದಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದ ಪದಾಧಿಕಾರಿಗಳು ಬುಧವಾರ ರಸ್ತೆ ತಡೆ ನಡೆಸಿದರು
ಸುರಪುರದ ಹಸನಾಪುರ ವೃತ್ತದಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದ ಪದಾಧಿಕಾರಿಗಳು ಬುಧವಾರ ರಸ್ತೆ ತಡೆ ನಡೆಸಿದರು   

ಸುರಪುರ: ಕ್ಷೇತ್ರದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಿಯಮನುಸಾರವಾಗಿ ಜಾರಿ ಮಾಡುತ್ತಿಲ್ಲ. ಬೋಗಸ್ ಜಾಬ್ ಕಾರ್ಡಗಳಿವೆ. ಲೋಕಾಯುಕ್ತ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದ ಪದಾಧಿಕಾರಿಗಳು ಹಸನಾಪುರ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘ರಾಜಕೀಯ ಒತ್ತಡದಿಂದ ಬೋಗಸ್ ಜಾಬ್ ಕಾರ್ಡ್ ಮಾಡಲಾಗಿದೆ. ಮತಕ್ಷೇತ್ರದ ಹುಣಸಗಿ ಮತ್ತು ಸುರಪುರ ತಾಲ್ಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಯಾವ ರೀತಿ ನಡೆದಿದೆ. ನಿಜವಾದ ಕೂಲಿ ಕಾರ್ಮಿಕರಿಗೆ ಕೆಲಸ ನೀಡುತ್ತಿದ್ದಾರೆಯೇ, ನಿಯಮನುಸಾರ ಕಾಮಗಾರಿ ಮಾಡಿದ್ದಾರೆಯೇ ಎಂಬುದರ ಬಗ್ಗೆ ತನಿಖೆಯಾಗಬೇಕು. ತಪ್ಪಿಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು’ ಎಂದು ಒತ್ತಾಯಿಸಿದರು. ‘ಪಂಚಾಯತ್‌ ರಾಜ್ ಎಂಜಿನಿಯರಿಂಗ್, ತೋಟಗಾರಿಕೆ ಇಲಾಖೆ ಸೇರಿ ಇನ್ನಿತರ ಇಲಾಖೆಗಳಲ್ಲಿ ಯೋಜನೆ ನಿಯಮನುಸಾರ ಜಾರಿ ಮಾಡಿದ ಬಗ್ಗೆ ಲೋಕಾಯುಕ್ತರಿಂದ ತನಿಖೆಯಾಗಬೇಕು. ಇಲ್ಲದಿದ್ದರೆ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳ ಲಾಗುವುದು’ ಎಂದು ಎಚ್ಚರಿಸಿದರು. ತಾಲ್ಲೂಕು ಪಂಚಾಯಿತಿ ಇಒ ಅಮರೇಶ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ರಾಜ್ಯ ಘಟಕದ ಉಪಾಧ್ಯಕ್ಷ ನಾಗಣ್ಣ ಕಲ್ಲದೇವನಹಳ್ಳಿ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಭೀಮರಾಯ ಸಿಂದಗೇರಿ, ಜಿಲ್ಲಾ ಘಟಕದ ಕಾರ್ಯದರ್ಶಿ ರಾಜೂ ದರಬಾರಿ, ಸಂಘಟನಾ ಕಾರ್ಯದರ್ಶಿ ಶಿವಶಂಕರ ಹೊಸ್ಮನಿ, ತಾಲ್ಲೂಕು ರೈತ ಘಟಕದ ಅಧ್ಯಕ್ಷ ಗೋಪಾಲ ಬಾಗಲಕೋಟೆ, ಮುಖಂಡರಾದ ಸುರೇಶ, ಶರಣಪ್ಪ ತೆಗ್ಗೆಳ್ಳಿ ಹಾಗೂ ಸಂತೋಷ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.