ಅಮಾನತು
ಯಾದಗಿರಿ: ಕರ್ತವ್ಯಲೋಪ, ಶಿಸ್ತು ಉಲ್ಲಂಘನೆ ಆರೋಪದಡಿ ಹುಣಸಗಿ ತಾಲ್ಲೂಕಿನ ನಾರಾಯಣಪುರ ಠಾಣೆಯ ಪಿಎಸ್‌ಐ ರಾಜಶೇಖರ್ ರಾಠೋಡ್ ಅವರನ್ನು ಅಮಾನತು ಮಾಡಲಾಗಿದೆ.
ರಾಜಶೇಖರ್ ಅವರು ರೌಡಿಶೀಟರ್ ನಾಗರಾಜ ಜತೆ ಫೋಟೊ ತೆಗೆಸಿಕೊಂಡು ಜನ್ಮದಿನ ಆಚರಿಸಿಕೊಂಡಿದ್ದರು ಎನ್ನಲಾದ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.
‘ಪಿಎಸ್‌ಐ ಅವರು ನಾಗರಾಜ ಜತೆ ಕೈಜೋಡಿಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ’ ಎಂದು ಮಾಜಿ ಸಚಿವ ರಾಜುಗೌಡ ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.