ADVERTISEMENT

‘ವೈದ್ಯೆ ಹಂತಕರಿಗೆ ಶಿಕ್ಷೆ ವಿಧಿಸಿ’

ಎಐಎಂಎಸ್‍ಎಸ್, ಎಐಡಿಎಸ್‌ಒ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2019, 8:46 IST
Last Updated 4 ಡಿಸೆಂಬರ್ 2019, 8:46 IST
ಯಾದಗಿರಿಯ ಕನಕ ವೃತ್ತದಲ್ಲಿ ಎಐಎಂಎಸ್‍ಎಸ್ ಮತ್ತು ಎಐಡಿಎಸ್‌ಒ ಸಮಿತಿ ಪ್ರತಿಭಟನೆ ನಡೆಸಲಾಯಿತು
ಯಾದಗಿರಿಯ ಕನಕ ವೃತ್ತದಲ್ಲಿ ಎಐಎಂಎಸ್‍ಎಸ್ ಮತ್ತು ಎಐಡಿಎಸ್‌ಒ ಸಮಿತಿ ಪ್ರತಿಭಟನೆ ನಡೆಸಲಾಯಿತು   

ಯಾದಗಿರಿ: ಡಾ.ಪ್ರಿಯಾಂಕಾ ರೆಡ್ಡಿ ಅವರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‍ಎಸ್) ಮತ್ತು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಸಮಿತಿ ಜಂಟಿಯಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಗರದ ಕನಕ ವೃತ್ತದಲ್ಲಿ ಪ್ರತಿಭಟಿಸಲಾಯಿತು.

ಎಐಯುಟಿಯುಸಿ ಜಿಲ್ಲಾ ಸಂಚಾಲಕ ಡಿ.ಉಮಾದೇವಿ ಮಾತನಾಡಿ, ‘ಡಾ.ಪ್ರಿಯಾಂಕ ರೆಡ್ಡಿಗೆ ನಾಲ್ಕು ಜನ ದುಷ್ಕರ್ಮಿಗಳು ಸಹಾಯ ಮಾಡುವ ನೆಪವೊಡ್ಡಿ ಸಾಮೂಹಿಕ ಅತ್ಯಾಚಾರ ಎಸಗಿ ನಂತರ ಸುಟ್ಟುಹಾಕಿ ಬರ್ಬರ ಹತ್ಯೆ ಮಾಡಲಾಗಿದೆ. ಮಾನವ ಜನಾಂಗ ತಲೆ ತಗ್ಗಿಸುವಂತಾಗಿದೆ. ತಪ್ಪಿತಸ್ಥರಿಗೆ ಉಗ್ರಶಿಕ್ಷೆಗೆ ನೀಡಬೇಕು. ಮಹಿಳೆಯರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು’ ಆಗ್ರಹಿಸಿದರು.
ಎಐಡಿಎಸ್‌ಒ ಜಿಲ್ಲಾ ಅಧ್ಯಕ್ಷ ಎಚ್.ಪಿ.ಸೈದಪ್ಪ ಮಾತನಾಡಿ, ‘ದೇಶದಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಲು ಸರ್ಕಾರಗಳು ವಿಫಲವಾಗಿವೆ. ಅತ್ಯಾಚಾರ, ಕಿರುಕುಳ, ಕೊಲೆ ಪ್ರಕರಣಗಳು ಹೆಚ್ಚುತ್ತಿದ್ದರೂ ಶಿಕ್ಷೆ ಪ್ರಮಾಣ ಕಡಿಮೆ ಇರುವುದರಿಂದ ಆರೋಪಿಗಳಿಗೆ ಶಿಕ್ಷೆಯಿಂದ ರಕ್ಷಿಸುತ್ತಿರುವುದು ಖಂಡನೀಯ. ಮಹಿಳೆಯರ ಅಭದ್ರತೆಗೆ ಕಾರಣವಾದ ಅಶ್ಲೀಲ ಸಿನಿಮಾ, ಜಾಹಿರಾತುಗಳನ್ನು ನಿಷೇಧಿಸದೆ ವ್ಯಾಪಕ ಪ್ರಚಾರಕ್ಕೆ ಅನುಮತಿ ನೀಡುತ್ತಿರುವ ಪರಿಣಾಮ ಮಹಿಳೆಯರ ಬದುಕು ಅತಂತ್ರ ಸ್ಥಿತಿಗೆ ತಳ್ಳಲಾಗುತ್ತಿದೆ. ಅತ್ಯಾಚಾರಗಳು ನಡೆಯುತ್ತೀರುವುದು ಅತಂಕಕಾರಿ ವಿಷಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಎಂಎಸ್‍ಎಸ್ ಸಂಘಟನಾ ಕರಾದ ಗೀತಾ, ಬಿ.ಕೆ,ಸುಭಾ ಷ್ಚಂದ್ರ, ಎಐಡಿಎಸ್‌ಒ ಜಿಲ್ಲಾ ಉಪಾಧ್ಯಕ್ಷ ಕಾ.ಸಿಂಧು, ಪ್ರದೀಪ್‌, ನಾಗರಾಜ, ಶಿವುಕುಮಾರ, ಮಲ್ಲಪ್ಪ, ಹಣಮಂತ, ಮುಸ್ತಾನ್, ಅರ್ಪಿತಾ, ನಿರ್ಮಲಾ, ನಿಷಾ, ಕವಿತಾ, ಸುನೀತಾ, ಶಿವಾನಿ, ಸಂಪತ್ ಕುಮಾರ, ಅಭಿಷೆಕ್, ಮೌನೇಶ, ಸಿದ್ಧಲಿಂಗ, ಮೌಲಾಲಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.