ADVERTISEMENT

ಯಾದಗಿರಿ: ತೊಗರಿ ಕ್ವಿಂಟಲ್‌ಗೆ ₹8,000 ಬೆಂಬಲ ಬೆಲೆಯಲ್ಲಿ ಖರೀದಿ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2025, 15:22 IST
Last Updated 17 ಫೆಬ್ರುವರಿ 2025, 15:22 IST
<div class="paragraphs"><p>ತೊಗರಿ</p></div>

ತೊಗರಿ

   

ಯಾದಗಿರಿ: 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ, ತಕ್ಷಣದಿಂದಲೇ ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ₹7,550 ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ₹450 ಪ್ರತಿ ಕ್ವಿಂಟಲ್‌ಗೆ ಸೇರಿ ಒಟ್ಟು ₹8,000 ಪ್ರತಿ ಕ್ವಿಂಟಲ್‌ರಂತೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಕಳೆದ ಜನವರಿ ತಿಂಗಳಲ್ಲಿ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು ಹಾಗೂ ಆರ್ಥಿಕ ಇಲಾಖೆ ಸಹಮತಿ ನೀಡಲಾಗಿರುತ್ತದೆ. ಈ ಕುರಿತು ಸಂಬಂಧಿಸಿದ ಇಲಾಖೆಗೆ ತಕ್ಷಣದಿಂದ ಅಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.

ADVERTISEMENT

ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ.

ರೈತರು ತಮ್ಮ ಹತ್ತಿರದ ಪಿಎಸಿಎಸ್, ಎಫ್‌ಪಿಒ, ಟಿಎಪಿಸಿಎಂಎಸ್‌ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸದುಪಯೋಗ ಪಡೆದುಕೊಳ್ಳಲು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.