ADVERTISEMENT

ಗುಣಾತ್ಮಕ ಶಿಕ್ಷಣಕ್ಕೆ ಸೇವಾ ಮನೋಭಾವ ಮುಖ್ಯ: ಬಿ.ಬಿ.ಹೆಬ್ಬಾಳೆ

ಪಿಯುಸಿ ಕಾಲೇಜಿನಲ್ಲಿ ಸೇವೆಸಲ್ಲಿಸಿದ ಹಳೆ ಉಪನ್ಯಾಸಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 4:15 IST
Last Updated 19 ಫೆಬ್ರುವರಿ 2026, 4:15 IST
ಸೈದಾಪುರ ಪಟ್ಟಣದ ಮಲ್ಹಾರ ಕಾರಡ್ಡಿ ಮತ್ತು ಬಸವಂತ್ರಾಯ ಸಿದ್ದಪ್ಪ ಸ್ಮಾರಕ ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದೆ ಸೇವೆ ಸಲ್ಲಿಸಿದ ಹಿರಿಯ ಉಪನ್ಯಾಸಕರನ್ನು ಸನ್ಮಾನಿಸಲಾಯಿತು
ಸೈದಾಪುರ ಪಟ್ಟಣದ ಮಲ್ಹಾರ ಕಾರಡ್ಡಿ ಮತ್ತು ಬಸವಂತ್ರಾಯ ಸಿದ್ದಪ್ಪ ಸ್ಮಾರಕ ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದೆ ಸೇವೆ ಸಲ್ಲಿಸಿದ ಹಿರಿಯ ಉಪನ್ಯಾಸಕರನ್ನು ಸನ್ಮಾನಿಸಲಾಯಿತು   

ಸೈದಾಪುರ: ‘ಗುಣಾತ್ಮಕ ಶಿಕ್ಷಣಕ್ಕೆ ಸೇವಾ ಮನೋಭಾವನೆ ಅತಿ ಮುಖ್ಯವಾಗಿದೆ. ಈ ದಿಸೆಯಲ್ಲಿ ಸಂಘದ ಸಹಕಾರದೊಂದಿಗೆ ಉಪನ್ಯಾಸಕರು ಕಾರ್ಯ ನಿರ್ವಹಿಸಿರುವುದರಿಂದ ಗ್ರಾಮೀಣ ಭಾಗದಲ್ಲಿ ಕಾಲೇಜು ತನ್ನದೆ ಮಹತ್ವ ಪಡೆದುಕೊಂಡಿದೆ’ ಎಂದು ನಿವೃತ್ತ ಮುಖ್ಯಶಿಕ್ಷಕ ಬಿ.ಬಿ.ಹೆಬ್ಬಾಳೆ ಅಭಿಪ್ರಾಯಪಟ್ಟರು.

ಪಟ್ಟಣದ ಮಲ್ಹಾರ ಕಾರಡ್ಡಿ ಬಸವಂತ್ರಾಯ ಮತ್ತು ಸಿದ್ದಪ್ಪ ಸ್ಮಾರಕ ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ ಹಳೆಯ ಹಿರಿಯ ಉಪನ್ಯಾಸಕರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘ಶಿಕ್ಷಕರ ಮಾರ್ಗದರ್ಶನದಲ್ಲಿ ಸಾಗುವುದರ ಮೂಲಕ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿ’ ಎಂದು ಹಾರೈಸಿದರು.

ADVERTISEMENT

ಇದಕ್ಕೂ ಮೊದಲು ಕಾಲೇಜಿನಲ್ಲಿ ಸೇವೆ ಸಲ್ಲಿಸಿದ ಹಳೆ ಉಪನ್ಯಾಸಕರಾದ ಪ್ರಕಾಶ ಕುಲಕರ್ಣಿ, ಚಂದ್ರಯ್ಯ ಬಾಡಿಯಲ, ಹಂಪಣ್ಣ ಸಜ್ಜನಶೆಟ್ಟಿ, ಲಿಂಗಾರೆಡ್ಡಿ ನಾಯಕ, ಗೂಳಪ್ಪ.ಎಸ್.ಮಲ್ಹಾರ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾ ವರ್ಧಕ ಸಂಸ್ಥೆಯ ಉಪಾಧ್ಯಕ್ಷ ಹಾಗೂ ಗುರುಮಠಲ್ ತಾಲ್ಲೂಕು ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಲಕ್ಷ್ಮೀಕಾಂತರಡ್ಡಿ ಪಲ್ಲಾ, ಸಹ ಕಾರ್ಯದರ್ಶಿ ಕೆ.ಬಿ.ಗೋವರ್ಧನ, ಆಡಳಿತ ಮಂಡಳಿಯ ಸದಸ್ಯರಾದ ಬೂದೆಪ್ಪಗೌಡ ಭೀಮನಳ್ಳಿ, ಸಂಗಾರಡ್ಡಿಗೌಡ ಮಲ್ಹಾರ, ಪ್ರಭುಲಿಂಗ ವಾರದ, ಸಿದ್ರಾಮಪ್ಪಗೌಡ ಗೊಂದಡಗಿ, ಸುರೇಶ ಆನಂಪಲ್ಲಿ, ಚನ್ನಾರೆಡ್ಡಿ ಹುಣಸೇಮರ, ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ, ಕರಬಸಯ್ಯ ದಂಡಿಗಿಮಠ, ಪ್ರಕಾಶರೆಡ್ಡಿ, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.