ADVERTISEMENT

ಡಿಸಿಯಿಂದ ಕ್ವಾರಂಟೈನ್ ಕೇಂದ್ರ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 13:05 IST
Last Updated 9 ಜೂನ್ 2021, 13:05 IST
ಹುಣಸಗಿ ತಾಲ್ಲೂಕಿನ ರಾಜನಕೊಳ್ಳೂರು, ಕೊಡೇಕಲ್ಲ ಕೋವಿಡ್ ಕ್ವಾರಂಟೈನ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ. ಆರ್ ಭೇಟಿ ನೀಡಿದರು
ಹುಣಸಗಿ ತಾಲ್ಲೂಕಿನ ರಾಜನಕೊಳ್ಳೂರು, ಕೊಡೇಕಲ್ಲ ಕೋವಿಡ್ ಕ್ವಾರಂಟೈನ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ. ಆರ್ ಭೇಟಿ ನೀಡಿದರು   

ಯಾದಗಿರಿ: ಹುಣಸಗಿ ತಾಲ್ಲೂಕಿನ ರಾಜನಕೊಳ್ಳೂರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಮತ್ತು ಕೊಡೇಕಲ್ಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಕೋವಿಡ್ ಕ್ವಾರಂಟೈನ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ .ಆರ್ ಭೇಟಿ ನೀಡಿ ಪರಿಶೀಲಿಸಿದರು.

ಉಭಯ ಶಾಲೆಗಳ ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವ ಸೋಂಕಿತರ ಯೋಗ-ಕ್ಷೇಮ ವಿಚಾರಿಸಿದ ಅವರು, ಅಡುಗೆ ತಯಾರಿಸುವ ಕೋಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸೋಂಕಿತರಿಗೆ ಊಟೋಪಚಾರದಲ್ಲಿ ಕೊರತೆಯಾಗಂತೆ ನೋಡಿಕೊಳ್ಳಲು ಸೂಚಿಸಿದರು. ಆರೋಗ್ಯ ದೃಷ್ಟಿಯಿಂದ ಎಲ್ಲಾ ಕೋಣೆಗಳ ಸ್ವಚ್ಛತೆಗೆ ಆದ್ಯತೆ ನೀಡಿ ಶೌಚಾಲಯ, ಕುಡಿಯುವ ನೀರು ಅಗತ್ಯ ಮೂಲಸೌಕರ್ಯಗಳ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಇದಕ್ಕೂ ಮುನ್ನ ತೋಟಗಾರಿಕೆ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಹುಣಸಗಿ ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ, ಉಪ ತಹಶೀಲ್ದಾರ ಬಸವರಾಜ ಬಿರಾದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.