ಶಹಾಪುರ: ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಆಗಾಗ ಬಿಡುವು ನೀಡಿ ಸುರಿಯುತ್ತಿ ರುವ ಮಳೆಯಿಂದಾಗಿ ನಗರದ ಬೆಟ್ಟ ಪ್ರದೇಶ ಹಸಿರು ಹೊದ್ದು ಮಲಗಿದಂತೆ ಕಾಣುತ್ತಿದೆ.
ಬೆಟ್ಟದ ಇಳಿಜಾರು ಪ್ರದೇಶದಲ್ಲಿ ಮಳೆ ನೀರು ಟಿಸಿಲೊಡೆದು ನೊರೆ ಹಾಲಿನಂತೆ ಹರಿಯುತ್ತಿದೆ. ಇದು ಜಲಪಾತದಂತೆ ನೋಡುಗರ ಕಣ್ಣಿಗೆ ಆನಂದವನ್ನುಂಟು ಮಾಡಿದೆ.
ರೈತರು ಜೂನ್ ತಿಂಗಳಲ್ಲಿ ಮಳೆ ಕೊರತೆ ಅನುಭವಿಸಿದ್ದರು. ಜಿಟಿ ಜಿಟಿ ಮಳೆಯಿಂದ ಬಿತ್ತನೆ ಮಾಡಿದ ಹತ್ತಿ ಬೆಳೆಗೆ ಅನುಕೂಲವಾಗಿದೆ. ಅಲ್ಲದೆ ನಗರಕ್ಕೆ ಹೊಂದಿಕೊಂಡಿರುವ ಮಾವಿನ ಹಾಗೂ ನಾಗರಕೆರೆಯ ಒಡಲು ತುಂಬಿಕೊಳ್ಳುತ್ತಿದೆ. ಇದರಿಂದ ಅಂತರ್ಜಮಟ್ಟ ಹೆಚ್ಚಳವಾಗಿದೆ ಎನ್ನುತ್ತಾರೆ ನಗರದ ನಿವಾಸಿ ಉಮೇಶ ಮುಡಬೂಳ.
‘ಜಿಟಿ ಜಿಟಿ ಮಳೆಯಿಂದ ಗ್ರಾಮೀಣ ಪ್ರದೇಶದ ಕೆಲ ಕಡೆ ರಸ್ತೆಗಳು ಹಾಳಾಗಿವೆ. ಕುರಿಗಾಯಿಗಳು ಕುರಿ ಮೇಯಿಸಲು ಪರದಾಡುತ್ತಿದ್ದಾರೆ. ಜಿಟಿ ಜಿಟಿ ಮಳೆಯಿಂದ ಕುರಿಗೆ ರೋಗಬಾಧೆಯ ಆತಂಕ ಎದುರಾಗಿದೆ’ ಎಂದು ಮಲ್ಲಪ್ಪ ಆತಂಕ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.