ವಡಗೇರಾ: ತಾಲ್ಲೂಕಿನ ಬಬಲಾದ ಗ್ರಾಮದ ಜಲಾಲ್‌ಬಿ ಅವರ ಮನೆಯೊಳಗೆ ಮಳೆ ನೀರು ನುಗ್ಗಿ ದವಸ–ಧಾನ್ಯ ಸಂಪೂರ್ಣವಾಗಿ ಹಾಳಾಗಿದೆ.
ಗುರುವಾರ ರಾತ್ರಿ ಧಾರಾಕಾರವಾಗಿ ಮಳೆ ಸುರಿದಿದೆ. ಮನೆಯೊಳಗೆ ನೀರು ನುಗ್ಗಿದೆ. ಜೋಳ, ಅಕ್ಕಿ ಹಾಗೂ ಇನ್ನಿತರ ವಸ್ತುಗಳು ನೀರಿನಲ್ಲಿ ತೇಲಿ ಹೋಗಿವೆ. ಸುಮಾರು ₹20 ಸಾವಿರದಿಂದ ₹30 ಸಾವಿರ ನಷ್ಟವಾಗಿದೆ ಎಂದು ಕುಟುಂಬದವರು ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಗೌತಮ ಕ್ರಾಂತಿ ಭೇಟಿ ನೀಡಿ ಪರಿಶೀಲಿಸಿದರು. ಪರಿಹಾರಕ್ಕೆ ತಹಶೀಲ್ದಾರ್ ಅವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.