ADVERTISEMENT

ಸೋದರ ಮಾವನಿಂದ ಬಾಲಕಿ ಮೇಲೆ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 1:57 IST
Last Updated 22 ಜೂನ್ 2022, 1:57 IST

ಯಾದಗಿರಿ: ತಾಲ್ಲೂಕಿನ ಗ್ರಾಮವೊಂದರ 13 ವರ್ಷದ ಬಾಲಕಿ ಮೇಲೆ ಆಕೆಯ ಸೋದರ ಮಾವ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಮಲ್ಲಿಕಾರ್ಜುನ ನಗಲಾಪುರ ಎಂಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಮಲ್ಲಿಕಾರ್ಜುನ ನಗಲಾಪುರ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿಯ ತಂದೆ 8 ವರ್ಷದ ಹಿಂದೆ ಮೃತಪಟ್ಟಿದ್ದಾರೆ. ತಾಯಿ ಮತ್ತು ಐವರು ಮಕ್ಕಳು ಬೆಂಗಳೂರಿನಲ್ಲಿ ಇದ್ದಾರೆ. ಅತ್ಯಾಚಾರದಿಂದ ಬಾಲಕಿ 7ತಿಂಗಳಗರ್ಭಿಣಿಯಾಗಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಬಾಲಕಿ ಬೆಂಗಳೂರಿನ ಶಾಲೆಯಲ್ಲಿ ಓದುತ್ತಿದ್ದು, ಆಗಾಗ ಹಬ್ಬ, ಜಾತ್ರೆ, ಸಮಾರಂಭಗಳಿಗೆ ಊರಿಗೆ ಬಂದು ಹೋಗುತ್ತಿದ್ದರು. ಇದನ್ನು ಸಲಿಗೆಯಾಗಿ ತೆಗೆದುಕೊಂಡ ಆರೋಪಿಯು ಆಕೆ ಇಲ್ಲಿ ಬಂದಾಗ, ಅತ್ಯಾಚಾರವೆಸಗಿದ್ದಾನೆ ಎಂದು ತಾಯಿ, ಮಗಳು ದೂರು ನೀಡಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಮಹಿಳಾ ಠಾಣೆ ಪೊಲೀಸ್‌ ಇನ್ಸ್‌ಪೆಕ್ಟರ್‌ನಿಂದ ತನಿಖೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.