ADVERTISEMENT

ಸೈದಾಪುರ: ‘ಡಾ.ಬಿ.ಆರ್.ಅಂಬೇಡ್ಕರ್’ ಓದು ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2021, 3:53 IST
Last Updated 7 ನವೆಂಬರ್ 2021, 3:53 IST
ಸೈದಾಪುರ ಪಟ್ಟಣದ ಮಲ್ಹಾರ ಕಾರಡ್ಡಿ ಬಸವಂತರಾಯ, ಸಿದ್ದಪ್ಪ ಸ್ಮಾರಕ ವಿದ್ಯಾವರ್ಧಕ ಪಿಯು ಕಾಲೇಜಿನಲ್ಲಿ ನಡೆದ ‘ಬಿ.ಆರ್.ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿಪತ್ರ ಹಾಗೂ ಪುಸ್ತಕ ವಿತರಿಸಲಾಯಿತು
ಸೈದಾಪುರ ಪಟ್ಟಣದ ಮಲ್ಹಾರ ಕಾರಡ್ಡಿ ಬಸವಂತರಾಯ, ಸಿದ್ದಪ್ಪ ಸ್ಮಾರಕ ವಿದ್ಯಾವರ್ಧಕ ಪಿಯು ಕಾಲೇಜಿನಲ್ಲಿ ನಡೆದ ‘ಬಿ.ಆರ್.ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿಪತ್ರ ಹಾಗೂ ಪುಸ್ತಕ ವಿತರಿಸಲಾಯಿತು   

ಸೈದಾಪುರ: ಸಾಮಾಜಿಕ ಸಮಸ್ಯೆಗಳ ಮಧ್ಯೆಯೂ ಸಾಧನೆ ಮಾಡಿ ದೇಶಕ್ಕೆ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಯುವಕರಿಗೆ ಮಾದರಿಯಾಗಿದೆ ಎಂದು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ತಿಳಿಸಿದರು.

ಪಟ್ಟಣದ ಮಲ್ಹಾರ ಕಾರಡ್ಡಿ ಬಸವಂತರಾಯ ಮತ್ತು ಸಿದ್ದಪ್ಪ ಸ್ಮಾರಕ ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ‘ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ ಓದು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಠಿಣ ಪರಿಶ್ರಮದಿಂದ ಉನ್ನತ ವ್ಯಾಸಂಗ ಮಾಡಿ ದೇಶದ ಎಲ್ಲ ಸಮುದಾಯಗಳಿಗೆ ಹಕ್ಕುಗಳನ್ನು ನೀಡುವಂಥ ಸಂವಿಧಾನ ರೂಪಿಸುವಲ್ಲಿ ಅಂಬೇಡ್ಕರ್ ಅವರ ಪಾತ್ರ ಮಹತ್ವದ್ದಾಗಿದೆ. ಸರ್ಕಾರ ಇಂಥ ಕಾರ್ಯಕ್ರಮಗಳ ಮೂಲಕ ಅವರ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಮುಟ್ಟಿಸುವ ಕೆಲಸ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ADVERTISEMENT

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೊಟ್ರೇಶ ಮರಬನಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಓದುವಿನ ಅಭಿರುಚಿ ಹೆಚ್ಚಿಸಿಕೊಳ್ಳಲು ಸರ್ಕಾರ ಸಾಕಷ್ಟು ಅವಕಾಶಗಳನ್ನು ಕಲ್ಪಿಸಿದೆ. ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದ ಮೂಲಕ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಿ ವಿಜೇತರಿಗೆ ಪುಸ್ತಕಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.

ಅರ್ಥಶಾಸ್ತ್ರ ಉಪನ್ಯಾಸಕ ಹಂಪಣ್ಣ ಸಜ್ಜನಶೆಟ್ಟಿ ಮಾತನಾಡಿದರು.

ಡಿ.ಎಲ್.ಇಡಿ ಕಾಲೇಜಿನ ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ ಉಪನ್ಯಾಸ ನೀಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ ಅಧ್ಯಕ್ಷತೆ ವಹಿಸಿದ್ದರು.

ಬಸವರಾಜ ಶಿನ್ನೂರು, ಉಪನ್ಯಾಸಕರಾದ ದೇವಿಂದ್ರ ಪೀರಾ, ಶಾಂತಲಾ.ಎನ್, ಇಂದಿರಾ ತೂರೆ, ರಾಜಶೇಖರ ಪಾಟೀಲ ಶೆಟ್ಟಹಳ್ಳಿ, ಅನುರಾಧ, ಸದಾಶಿವ, ಭರತ, ವರ್ಷ ಸೇರಿದಂತೆ ವಿದ್ಯಾರ್ಥಿಗಳು ಇದ್ದರು. ಬಸವರಾಜ ಭರಮಶೆಟ್ಟಿ ಸ್ವಾಗತಿಸಿದರು. ಚಂದ್ರಶೇಖರ ಡೊಣ್ಣೆಗೌಡ ನಿರೂಪಿಸಿದರು. ವಿದ್ಯಾರ್ಥಿನಿ ನಿಸರ್ಗ ಸಿದ್ರಾಮ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.