ವಡಿಗೇರಾ: ‘ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅವರ ಹೆಸರು ಇಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಅಖಿಲ ಭಾರತೀಯ ಕೋಲಿ ಸಮಾಜ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ ಒತ್ತಾಯಿಸಿದರು.
ತಾಲ್ಲೂಕಿನ ಟಿ. ವಡಗೇರಾ ಗ್ರಾಮದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡ ನಿಜಶರಣರ ಮೂರ್ತಿಗೆ ಪೂಜೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘12ನೇ ಶತಮಾನದಲ್ಲಿ ಸಮಾಜದ ಸುಧಾರಣೆಗೆ ಶ್ರಮಿಸಿದ ಬಸವಾದಿ ಶರಣರ ಸಾಲಿನಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸಿದ ನಿಜಶರಣ ಅಂಬಿಗರ ಚೌಡಯ್ಯ ಅವರು ಪ್ರಮುಖರಾಗಿದ್ದಾರೆ’ ಎಂದು ಹೇಳಿದರು.
‘ತಮ್ಮ ವಚನಗಳ ಮೂಲಕ ಕನ್ನಡ ನಾಡಿಗೆ ಹಾಗೂ ದೇಶಕ್ಕೆ ಬಹುದೊಡ್ಡ ಕೊಡುಗೆಯನ್ನು ನಿಜಶರಣರು ಕೊಟ್ಟಿದ್ದಾರೆ. ಇಂತಹ ಮಹಾನ ಶರಣರಾದ ಚೌಡಯ್ಯನ ಹೆಸರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ ಹೆಸರಿಡಬೇಕು’ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೆಂಕಟೇಶ ಹಾಲಗೇರಾ, ನಿಜಲಿಂಗಪ್ಪ ಮಾತಾ, ವೆಂಕಟೇಶ ಕಕ್ಕಸಗೇರಾ, ದೇವಿಂದಪ್ಪ ಗೂಡುರು, ಹೊನ್ನಯ್ಯ ಮ್ಯಾಗೇರಿ, ಮರೆಪ್ಪ ಸಾಧು, ದೇವಿಂದ್ರಪ್ಪ ಗಗ್ರಿ, ಮರೆಪ್ಪ ಗಗ್ರಿ, ಶಾಂತಗೌಡ, ದೇವು ಕಲಾಲ, ರಾಜು ಗಗ್ರಿ, ದೇವು ಕೊಮರನೋರ್, ತಿಪ್ಪಣ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.