ADVERTISEMENT

ಯಾದಗಿರಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ರಿಂದ ರಾಷ್ಟ್ರ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 7:20 IST
Last Updated 26 ಜನವರಿ 2023, 7:20 IST
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು   

ಯಾದಗಿರಿ: ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮೂರು ವರ್ಷಗಳ ಕಾಲ ವಿವಿಧ ರಾಷ್ಟ್ರಗಳ ಸಂವಿಧಾನ ಅಧ್ಯಯನ ಮಾಡಿ ನಮಗೆ ವಿಶ್ವದ ಶ್ರೇಷ್ಠ ಸಂವಿಧಾನ ನೀಡಿದ್ದಾರೆ ಎಂದರು.

ದೇಶದ ಸಂವಿಧಾನ ಸುದೀರ್ಘವಾಗಿದೆ. 448 ಲೇಖನಗಳು, 25 ಭಾಗಗಳು ಹಾಗೂ 12 ವೇಳಾಪಟ್ಟಿಗಳಲ್ಲಿ ಅಯೋಜಿತವಾಗಿದೆ. ಅಪರೂಪದ ಸಂವಿಧಾನವನ್ನು ಜಾರಿಗೊಳಿಸಿ ಒಪ್ಪಿಕೊಂಡ ಮಹತ್ವದ ದಿನವಾಗಿದೆ ಎಂದರು.

ADVERTISEMENT

ರಾಜ್ಯ ಸರ್ಕಾರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ ಎಂದರು.

ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ದೇವೇಂದ್ರನಾಥ ಕೆ.ನಾದ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರುದ್ರಗೌಡ ಪಾಟೀಲ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಜಿಲ್ಲಾಧಿಕಾರಿ ಸ್ನೇಹಲ್.ಆರ್, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಪ್ಪ ಕೊಟಪ್ಪಗೋಳ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಆರ್. ನಾಯ್ಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಚನ್ನಬಸವ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.