ADVERTISEMENT

ವಿವಿಧ ಇಲಾಖೆಗಳ ಕಚೇರಿ ಆರಂಭಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2023, 7:26 IST
Last Updated 6 ನವೆಂಬರ್ 2023, 7:26 IST
ಹುಣಸಗಿ ತಾಲ್ಲೂಕು ಕೇಂದ್ರದಲ್ಲಿ ಎಲ್ಲ ಇಲಾಖೆಗಳ ಕಚೇರಿಗಳನ್ನು ಆರಂಭಿಸುವಂತೆ ಪಟ್ಟಣದ ಪ್ರಮುಖರು ಶಾಸಕ ರಾಜಾ ವೆಂಕಟಪ್ಪನಾಯಕ ಅವರಿಗೆ ಮನವಿ ಸಲ್ಲಿಸಿದರು
ಹುಣಸಗಿ ತಾಲ್ಲೂಕು ಕೇಂದ್ರದಲ್ಲಿ ಎಲ್ಲ ಇಲಾಖೆಗಳ ಕಚೇರಿಗಳನ್ನು ಆರಂಭಿಸುವಂತೆ ಪಟ್ಟಣದ ಪ್ರಮುಖರು ಶಾಸಕ ರಾಜಾ ವೆಂಕಟಪ್ಪನಾಯಕ ಅವರಿಗೆ ಮನವಿ ಸಲ್ಲಿಸಿದರು   

ಹುಣಸಗಿ: ಹುಣಸಗಿ ತಾಲ್ಲೂಕು ಕೇಂದ್ರದಲ್ಲಿ ತಾಲ್ಲೂಕು ಮಟ್ಟದ ಎಲ್ಲ ಕಚೇರಿಗಳ ಆರಂಭಕ್ಕೆ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಮನವಿ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ 85 ಹಳ್ಳಿಗಳು ಹಾಗೂ 50ಕ್ಕೂ ಹೆಚ್ಚು ಜನವಸತಿ ಕೇಂದ್ರಗಳಿದ್ದು, ಈ ಎಲ್ಲ ಹಳ್ಳಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದ ಕಚೇರಿಗಳ ಅಗತ್ಯವಿದೆ. ಕ್ಷೇತ್ರ ಶಿಕ್ಷಣಾಧಿಕಾರಿ, ಕುಡಿಯುವ ನೀರು, ವಿದ್ಯುತ್, ಕೃಷಿ, ಲೋಕೋಪಯೋಗಿ, ಅರಣ್ಯ, ಹಿಂದುಳಿಗ ವರ್ಗ, ಅಲ್ಪಸಂಖ್ಯಾತ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳು ಶೀಘ್ರವೇ ಆರಂಭಿಸುವುದು ಅವಶ್ಯಕವಿದೆ ಎಂದು ಮನವಿ ಮಾಡಿರುವುದಾಗಿ ಹೇಳಿದ್ದಾರೆ.

‘ಈಗಾಗಲೇ ಕ್ಷೇತ್ರ ಶಿಕ್ಷಣ ಅಧಿಕಾರಿ ಕಚೇರಿ ಹಾಗೂ ಇತರ ಕಚೇರಿಗಳ ಆರಂಭಕ್ಕೆ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಇಲಾಖೆಗಳ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಶೀಘ್ರವೇ ಕೆಲ ಕಚೇರಿಗಳು ಆರಂಭಗೊಳ್ಳಲಿವೆ ಎಂದು ಶಾಸಕರು ಭರವಸೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

ಕೆಪಿಸಿಸಿ ಸದಸ್ಯ ಸಿದ್ದಣ್ಣ ಮಲಗಲದಿನ್ನಿ, ಚನ್ನಯ್ಯ ಸ್ವಾಮಿ ಹಿರೇಮಠ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಾಪುಗೌಡ ಪಾಟೀಲ, ಆರ್.ಎಂ. ರೇವಡಿ, ಬಿ.ಎಂ.ಬಳಿ, ಬಸವರಾಜ ಪಡಶೆಟ್ಟಿ, ರಾಚಪ್ಪ ಸಾಹು ಪಟ್ಟಣಶೆಟ್ಟಿ, ರವಿ ಮಲಗಲದಿನ್ನಿ, ರಾಜೂ ದೇಸಾಯಿ, ಮಂಜುನಾಥ ಬಳಿ, ಅಪ್ಪಣ್ಣ ಗೋಗಿ, ಅಮರೇಶ ದೇಸಾಯಿ, ರಮೇಶ ವಾಲಿ, ಅರುಣ ಮಲಗಲದಿನ್ನಿ, ಮಂಜು ನೂಲಿನ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.