ಯಾದಗಿರಿ: ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಕುಂದುಕೊರತೆಗಳನ್ನು ಪರಿಹರಿಸುವಂತೆ ಮೇಲ್ವಿಚಾರಕರ ಶ್ರೇಯೋಭಿವೃದ್ಧಿ ವೇದಿಕೆ ವತಿಯಿಂದ ಜಿಲ್ಲಾ ಪಂಚಾಯಿತಿ ಸಿಇಒಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಶಹಾಪುರ ತಾಲ್ಲೂಕಿನ ದೋರನಳ್ಳಿ ಗ್ರಾಮದಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ‘ಸ್ವಚ್ಛೋತ್ಸವ ನಿತ್ಯೋತ್ಸವ ಕಾರ್ಯಕ್ರಮದ ಉದ್ಘಾಟನೆಗಾಗಿ ಆಗಮಿಸಿದ್ದ ವೇಳೆ ಮನವಿ ಪತ್ರ ಸಲ್ಲಿಸಲಾಯಿತು.
ಮೇಲ್ವಿಚಾರಕರಿಗೆ ಕನಿಷ್ಠ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿದರು. ಈ ವೇಳೆ ಕಲ್ಯಾಣ ಕರ್ನಾಟಕ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಶ್ರೇಯೋಭಿವೃದ್ಧಿ ವೇದಿಕೆ ಅಧ್ಯಕ್ಷ ಚಂದ್ರಗಿರಿ ಹತ್ತಿಗೂಡುರು ಹಾಗೂ ಪ್ರಧಾನ ಕಾರ್ಯದರ್ಶಿ ಶಿವಪ್ಪ ರಸ್ತಾಪುರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.