ADVERTISEMENT

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 15:28 IST
Last Updated 17 ಸೆಪ್ಟೆಂಬರ್ 2020, 15:28 IST
ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ರಾಷ್ಟ್ರ ಧ್ವಜಾರೋಹಣ ನೆರವೇರಿಸಿ
ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ರಾಷ್ಟ್ರ ಧ್ವಜಾರೋಹಣ ನೆರವೇರಿಸಿ   

ಯಾದಗಿರಿ: ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಕಲ್ಯಾಣ ಕರ್ನಾಟಕ ಉತ್ಸವದ ಶುಭಾಶಯ ಕೋರಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಿಗೆ ನಿಜಾಮನ ಆಡಳಿತದಿಂದ ಒಂದು ವರ್ಷದ ನಂತರ ಸ್ವಾತಂತ್ರ್ಯ ಸಿಕ್ಕಿತು. ಯಾದಗಿರಿ ಹೊಸ ಜಿಲ್ಲೆ ಎಂದು ರಚನೆಯಾದಾಗ, ಬಹುತೇಕ ಜಿಲ್ಲೆಯು ಬಹಳಷ್ಟು ವಿಷಯಗಳಲ್ಲಿ ಹಿಂದುಳಿದಿದ್ದು, ಸರ್ಕಾರಿ ನೌಕರರ ಶ್ರಮದಿಂದ ಜಿಲ್ಲೆ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದ ಅವರು, ಕೋವಿಡ್-19 ಸಾಂಕ್ರಾಮಿಕ ಸೋಂಕಿನ ನಿಯಂತ್ರಣದಲ್ಲಿ ಇಲಾಖೆಗಳ ಸಹಕಾರ ಅಗತ್ಯವಿದೆ. ಅಧಿಕಾರಿಗಳು ಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಶ್ವೀಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.