ADVERTISEMENT

ಯಾದಗಿರಿ: ರಸ್ತೆ ಅಪಘಾತದಲ್ಲಿ ಐವರು ಮಹಿಳಾ ಕೂಲಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ಐವರು ಸಾವು..

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 7:16 IST
Last Updated 21 ಏಪ್ರಿಲ್ 2021, 7:16 IST
ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ಐವರು ಸಾವು..
ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ಐವರು ಸಾವು..   

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.

ಟಂಟಂ ಮತ್ತು ಬೂದಿ ಟ್ಯಾಂಕರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಟಂಟಂನಲ್ಲಿ 10 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ, ಐವರು ಮೃತಪಟ್ಟಿದ್ದರೆ, ಐವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ಮೃತರನ್ನು ಅಯ್ಯಮ್ಮ (60), ಶರಣಮ್ಮ (40), ಕಾಸೀಂಬೀ (40), ಭೀಮಬಾಯಿ (40) ಮತ್ತು ದೇವಿಂದ್ರಮ್ಮ (70) ಎಂದು ಗುರುತಿಸಲಾಗಿದ್ದು, ಮೃತರೆಲ್ಲರು ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರಾಗಿದ್ದಾರೆ.

ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೊಳ್ಳೂರು ಬಳಿಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.