ADVERTISEMENT

‘ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಆರ್‌ಪಿಐ ಬೆಂಬಲ’

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 6:30 IST
Last Updated 20 ಮಾರ್ಚ್ 2023, 6:30 IST
ವೆಂಕಟರಮಣಪ್ಪ
ವೆಂಕಟರಮಣಪ್ಪ   

ಯಾದಗಿರಿ: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಾರ್ಟಿ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆದೇಶದ ಮೇರೆಗೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಕರ್ನಾಟಕದಲ್ಲಿ ನಡೆಯುವ ವಿಧಾನಸಭಾ ಚುನಾವಣೆ ಎದುರಿಸುತ್ತೇವೆ ಎಂದು ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ಜೆ.ಸಿ.ವೆಂಕಟರಮಣಪ್ಪ ಹೇಳಿದರು.

ವಂಶಾಡಳಿತ ರಾಜಕಾರಣದ ಕಾಂಗ್ರೆಸ್ ಪಕ್ಷ ಮತ್ತು ಕುಟುಂಬ ರಾಜಕಾರಣ ಜೆಡಿಎಸ್ ಪಕ್ಷಗಳು 2023 ವಿಧಾನ ಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರದಂತೆ ಆರ್‌ಪಿಐ ತನ್ನ ಎಲ್ಲಾ ಪ್ರಯತ್ನವನ್ನು ಮಾಡುತ್ತದೆ ಎಂದು ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

31 ಜಿಲ್ಲೆಗಳಲ್ಲೂ ನಮ್ಮ ಪಕ್ಷಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಎಸ್ಸಿ, ಎಸ್ಟಿ ಮತ್ತಿತರ ಶೋಷಿತ ಸಮುದಾಯಗಳ ಮತಗಳನ್ನು ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಭ್ಯ ರ್ಥಿಗಳಿಗೆ ಮತಗಳು ಚಲಾಯಿಸದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

ADVERTISEMENT

ಕೇಂದ್ರದಲ್ಲಿ ನಮ್ಮ ಪಕ್ಷವು ಎನ್‌ಡಿಎ ಜೊತೆ ಮೈತ್ರಿ ಹೊಂದಿದೆ. ಕರ್ನಾಟಕದಲ್ಲೂ ನಮ್ಮ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಬಯಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿರುವ ಕ್ಷೇತ್ರಗಳಲ್ಲಿ ಆರ್‌ಪಿಐ ಸ್ಪರ್ದಿಸಲು ಇಚ್ಛಿಸಿದೆ. ಪಕ್ಷಕ್ಕೆ ಸುಮಾರು 10 ರಿಂದ 12 ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಬಿಟ್ಟುಕೊಡುತ್ತಾರೆ ಎನ್ನುವ ಭರವಸೆ ಹೊಂದಿದ್ದೇವೆ ಎಂದು ಹೇಳಿದರು.

ಮಹಾದೇವ ದಿಗ್ಗಿ, ಎ.ಬಿ.ಹೊಸಮನಿ, ಪಾಂಡುರಂಗ, ಅಮೃತ ಪಟೇಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.