ಮಾಧ್ವಾರ (ಸೈದಾಪುರ): ಕೊರೊನಾ ವೈರಸ್‍ದಿಂದ ಎಲ್ಲರೂ ತೊಂದರೆ ಅನುಭವಿಸುವಂತಾಗಿದೆ. ಆದರೆ ಕೊರೊನಾ ವೈರಸ್ ಬಗ್ಗೆ ಭಯ ಬೇಡ; ಎಚ್ಚರ ಇರಲಿ ಎಂದು ಸಂಘದ ಪ್ರಮುಖ ಸುರೇಶ ಮಾಗನೂರು ಹೇಳಿದರು.
ಸಮೀಪದ ಮಾಧ್ವಾರ ಗ್ರಾಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವತಿಯಿಂದ ಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರು ಸೇರಿದಂತೆ ನಿರ್ಗತಿಕರಿಗೆ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಿ ಮಾತನಾಡಿದರು.
ಪ್ರತಿಯೊಬ್ಬರೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಮೂಲಕ ಅದರ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು.
ಈ ವೇಳೆ ರಾಜು ಬಾಗ್ಲಿ, ಅನಂತರಡ್ಡಿ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.