
ಸುರಪುರ: ತಾಲ್ಲೂಕಿನ ರುಕ್ಮಾಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ₹ 15 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.
‘ಹಲವು ರೋಗಗಳು ಅಶುದ್ಧವಾದ ಕುಡಿಯುವ ನೀರು ಕುಡಿಯುವುದರಿಂದ ಬರುತ್ತವೆ ಎಂದು ವೈದ್ಯರು ಹೇಳುತ್ತಾರೆ. ಕಾರಣ ಪ್ರತಿಯೊಬ್ಬರು ಶುದ್ಧವಾದ ಕುಡಿಯುವ ನೀರನ್ನೇ ಕುಡಿಯಬೇಕು. ನಗರ ಸೇರಿದಂತೆ ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿವೆ’ ಎಂದು ತಿಳಿಸಿದರು.
ಕೆವೈಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಠ್ಠಲ ಯಾದವ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೇದಾರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ.ನಾಯಕ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಎಚ್.ಡಿ.ಪಾಟೀಲ, ಗ್ರಾಪಂ ಪಿಡಿಒ ದುರ್ಗಾಶ್ರೀ ಮಕಾಶಿ, ಮುಖಂಡರಾದ ಮಲ್ಲಣ್ಣ ಸಾಹುಕಾರ ಮುಧೋಳ, ರಾಜಾ ಸುಭಾಶ್ಚಂದ್ರನಾಯಕ, ಗ್ರಾಮದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು, ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.