ADVERTISEMENT

ತ್ಯಾಗ, ಬಲಿದಾನದ ಫಲ: ನಿಂಗಣ್ಣ ಬಿರಾದಾರ್

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 16:03 IST
Last Updated 17 ಸೆಪ್ಟೆಂಬರ್ 2020, 16:03 IST
ಸುರಪುರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು
ಸುರಪುರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು   

ಸುರಪುರ: ‘ದೇಶದೆಲ್ಲೆಡೆ ಸ್ವಾತಂತ್ರ್ಯ ಸಿಕ್ಕಿದ್ದರೂ ನಮ್ಮ ಭಾಗ ಕಲ್ಯಾಣ ಕರ್ನಾಟಕಕ್ಕೆ ತಡವಾಗಿ ಸಿಕ್ಕಿದೆ. ಇದರ ಹಿಂದೆ ತ್ಯಾಗ, ಬಲಿದಾನದ ಇತಿಹಾಸವಿದೆ. ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗ ಎಂಬ ಹಣೆಪಟ್ಟಿಯನ್ನು ಕಿತ್ತೊಗೆಯಲು ಪ್ರತಿಯೊಬ್ಬರು ಶ್ರಮಿಸಬೇಕು’ ಎಂದು ತಹಶೀಲ್ದಾರ್ ನಿಂಗಣ್ಣ ಬಿರಾದಾರ್ ಹೇಳಿದರು.

ಇಲ್ಲಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ದೇಶದ ಸಮಗ್ರತೆಯ ದೃಷ್ಟಿಯಿಂದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ‌್ ಪಟೇಲರು ಹೈದರಾಬಾದ್ ಸಂಸ್ಥಾನದ ನಿಜಾಮನನ್ನು ಮಣಿಸಿ ಈ ಭಾಗಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಟ್ಟಿದ್ದಾರೆ. ನಾವೆಲ್ಲರೂ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.

ADVERTISEMENT

ಗ್ರೇಡ್-2 ತಹಶೀಲ್ದಾರ್ ಸೋಫಿಯಾ ಸುಲ್ತಾನ್, ಶಿರಸ್ತೇದಾರ್ ಅಶೋಕಕುಮಾರ್ ಸುರಪುರಕರ್, ಸೋಮನಾಥ ನಾಯಕ, ಕಂದಾಯ ನಿರೀಕ್ಷಕರಾದ ಗುರುಬಸಪ್ಪ, ಸಂಗಮೇಶ, ಸೋಮಶೇಖರ್, ಕೊಂಡಲನಾಯಕ, ಮುಖಂಡರಾದ ಬಸವರಾಜ ಕೊಡೇಕಲ್, ನರಸಪ್ಪ ಚಾಮನಾಳ, ಶರಣು ಕಳ್ಳಿಮನಿ, ಗುರುನಾಥ ಶೀಲವಂತ, ಪ್ರದೀಪಕುಮಾರ್, ಬಾಲರಾಜ ಚಿನ್ನಾಕಾರ್, ಅರವಿಂದ, ಭೀಮರಾಯ ಯಾದವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.