ADVERTISEMENT

20ರಂದು ಸರ್ವಜ್ಞ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2020, 8:59 IST
Last Updated 16 ಫೆಬ್ರುವರಿ 2020, 8:59 IST
ಯಾದಗಿರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂತ ಕವಿ ಸರ್ವಜ್ಞ ಅವರ ಜಯಂತ್ಯುತ್ಸವದ ಪೂರ್ವಸಿದ್ಧತಾ ಸಭೆ ಜರುಗಿತು
ಯಾದಗಿರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂತ ಕವಿ ಸರ್ವಜ್ಞ ಅವರ ಜಯಂತ್ಯುತ್ಸವದ ಪೂರ್ವಸಿದ್ಧತಾ ಸಭೆ ಜರುಗಿತು   

ಯಾದಗಿರಿ: ಜಿಲ್ಲಾಡಳಿತ ವತಿಯಿಂದ ಸಂತ ಕವಿ ಸರ್ವಜ್ಞ ಅವರ ಜಯಂತ್ಯುತ್ಸವವನ್ನು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಫೆ.20ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಶುಕ್ರವಾರ ಇಲ್ಲಿ ಹೇಳಿದರು.

ಸರ್ವಜ್ಞ ಅವರ ಜಯಂತ್ಯುತ್ಸವದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಜಯಂತ್ಯುತ್ಸವ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂದು ಬೆಳಿಗ್ಗೆ ಸರ್ವಜ್ಞ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳು, ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿಯೂ ಶ್ರದ್ಧಾ, ಭಕ್ತಿಯೊಂದಿಗೆ ಕವಿ ಸರ್ವಜ್ಞ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ಸೂಚಿಸಿದರು.

ADVERTISEMENT

ನಗರದಲ್ಲಿ ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಸರ್ವಜ್ಞ ಅವರ ಭಾವಚಿತ್ರದ ಮೆರವಣಿಗೆ ನಡೆಸಲು ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ
ಅವರನ್ನು ನೇಮಿಸಲಾಯಿತು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ.ರೇವಣ್ಣ, ಕುಂಬಾರ ಸಮಾಜದ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ದರ್ಶನಾಪುರ, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಕುಂಬಾರ ಯರಗೋಳ, ಹಣಮಂತಪ್ಪ ಮಿನಾಸಪುರ, ರಾಜೇಂದ್ರ ಮುದ್ನಾಳ, ರಮೇಶ ಬದ್ದೆಪ್ಪಲ್ಲಿ, ನರಸಪ್ಪ ಮಾಧ್ವಾರ, ಗುರುಬಸವ ಹಾಲಗೇರಾ, ಭೀಮರಾಯ ಮುಂಡರಗಿ, ಶಿವರಾಜ ಹಾಲಗೇರಾ, ಬಸವರಾಜ ಅಜಲಾಪುರಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.