ADVERTISEMENT

ಹುಣಸಗಿ| ಮಹಿಳಾ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಒತ್ತು: ಸಂಗಯ್ಯ ಬಾಚ್ಯಾಳ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 6:01 IST
Last Updated 4 ಜನವರಿ 2026, 6:01 IST
ಹುಣಸಗಿ ತಾಲ್ಲೂಕಿನ ಬಲಶೆಟ್ಟಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನ  ಆಚರಿಸಲಾಯಿತು
ಹುಣಸಗಿ ತಾಲ್ಲೂಕಿನ ಬಲಶೆಟ್ಟಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನ  ಆಚರಿಸಲಾಯಿತು   

ಹುಣಸಗಿ: ‘ಮಹಿಳಾ ಶಿಕ್ಷಣ ಹಾಗೂ ಸಾಕ್ಷರತೆಗೆ ಸಾವಿತ್ರಿಬಾಯಿ ಫುಲೆ ಅವರ ಕೊಡಗೆ ಅಪಾರವಾಗಿದೆ’ ಎಂದು ಮುಖ್ಯ ಶಿಕ್ಷಕ ಸಂಗಯ್ಯ ಬಾಚ್ಯಾಳ ಹೇಳಿದರು.

ಹುಣಸಗಿ ತಾಲ್ಲೂಕಿನ ಬಲಶೆಟ್ಟಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಫುಲೆ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಮಾತನಾಡಿದರು.

‘ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವ ಜೊತೆಯಲ್ಲಿ ಬಾಲ್ಯವಿವಾಹ, ಸಹಗಮನ, ಸೇರಿದಂತೆ ಅನಿಷ್ಟ ಪದ್ಧತಿಗಳನ್ನು ತೊಡೆದು ಹಾಕುವಲ್ಲಿ ಅವಿರತ ಹೋರಾಟ ನಡೆಸಿದರು. ಅಲ್ಲದೇ ಸ್ತ್ರೀ ಸಮಾನತೆ ಹಾಗೂ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಶಾಲೆಗಳನ್ನು ಆರಂಭಿಸಿದ ಕೀರ್ತಿ ಫುಲೆ ಅವರಿಗೆ ಸಲ್ಲುತ್ತದೆ’ ಎಂದರು.

ADVERTISEMENT

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ವಿಜಯಲಕ್ಷ್ಮೀ ಹಿರೇಮಠ, ಸುವರ್ಣಾ, ಬಸೀರಾಬೇಗಂ, ಗುರುದೇವಿ ಮಲಗಲದನ್ನಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.