ADVERTISEMENT

ಪರಿಶಿಷ್ಟ ಜಾತಿ ಸಮೀಕ್ಷಾ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 14:04 IST
Last Updated 5 ಜೂನ್ 2025, 14:04 IST

ಯಾದಗಿರಿ: ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲ ಸಮಸ್ಯೆಗಳನ್ನು ಸರಿಪಡಿಸಲು ಪರಿಶಿಷ್ಟ ಜಾತಿ ಸಮೀಕ್ಷೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ ತಿಳಿಸಿದ್ದಾರೆ.

‘ಶಾಸಕರು, ಹಲವು ಸಂಘ ಸಂಸ್ಥೆಗಳು ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲವೊಂದು ಸಮಸ್ಯೆಗಳನ್ನು ಸರಿಪಡಿಸಲು ಸಮೀಕ್ಷಾ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಅವಧಿ ವಿಸ್ತರಿಸಲಾಗಿದೆ.

ಆನ್‌ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಜೂನ್ 8ರವರೆಗೆ ನಿಗದಿಪಡಿಸಲಾಗಿದೆ. ಮನೆ, ಮನೆ ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಶಿಬಿರಕ್ಕೆ ಆಗಮಿಸಿದಾಗ ಸುಸೂತ್ರವಾಗಿ ಸಮೀಕ್ಷೆ ನಡೆಸಲು ಕ್ರಮವಹಿಸಲಾವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.