ADVERTISEMENT

ಶಾಲೆ ಎರಡು ವಾರಕಾಲ ಮುಂದೂಡಿಕೆ

ಜಿಲ್ಲೆಯ ತಾಪಮಾನ ಹೆಚ್ಚಳದಿಂದ ಜೂನ್ 14ರಂದು ಶಾಲೆ ಆರಂಭ

​ಪ್ರಜಾವಾಣಿ ವಾರ್ತೆ
Published 28 ಮೇ 2019, 19:45 IST
Last Updated 28 ಮೇ 2019, 19:45 IST
ಯಾದಗಿರಿಯ ಅಂಬೇಡ್ಕರ್ ನಗರದ ಹಿರಿಯ ಪ್ರಾಥಮಿಕ ಶಾಲೆ ಆರಂಭಕ್ಕೆ ಮಂಗಳವಾರ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು
ಯಾದಗಿರಿಯ ಅಂಬೇಡ್ಕರ್ ನಗರದ ಹಿರಿಯ ಪ್ರಾಥಮಿಕ ಶಾಲೆ ಆರಂಭಕ್ಕೆ ಮಂಗಳವಾರ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು   

ಯಾದಗಿರಿ: ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕವಾಗಿದ್ದು, ಮಕ್ಕಳ ಹಿತದೃಷ್ಟಿಯಿಂದ ಶಾಲೆಯ ಪ್ರಾರಂಭದ ದಿನವನ್ನು ಎರಡು ವಾರ ಕಾಲ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದೂಡಿದೆ.

ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಶಾಲಾಪ್ರಾರಂಭವನ್ನು ಕೆಲವು ದಿನಗಳ ಕಾಲ ಮುಂದೂಡಲು ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಶಾಲೆಯನ್ನು ಜೂನ್ 14ರಂದು ಪ್ರಾರಂಭಿಸಲಾಗುತ್ತಿದೆ.

ಈ ರೀತಿ ಕೊರತೆಯಾಗುವ ಶಾಲಾ ಕೆಲಸದ ದಿನಗಳನ್ನು ಪ್ರತಿ ಶನಿವಾರ ಪೂರ್ಣ ದಿನವಾಗಿ ಉಪಯೋಗಿಸಿಕೊಳ್ಳುವುದು ಹಾಗೂ ಮಧ್ಯಂತರ ರಜಾ ಅವಧಿಯ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಕಾರ್ಯದರ್ಶಿ ಸೂಚನೆಯಂತೆ ನಿರ್ದೇಶಕರು (ಪ್ರಾಥಮಿಕ ಶಿಕ್ಷಣ) ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.