
ಯಾದಗಿರಿ: ಹಳೆಯ ವೈಷಮ್ಯಕ್ಕೆ ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸಮಾಜ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕಿ (ಎಸ್‌ಡಿಎ) ಅಂಜಲಿ ಗಿರೀಶ ಕಂಬಾನೂರ ಅವರು ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ.
ಶಹಾಬಾದ್ ನಗರಸಭೆಯ ಮಾಜಿ ಅಧ್ಯಕ್ಷೆಯೂ ಆಗಿದ್ದ ಅಂಜಲಿ ಅವರ ಮೇಲೆ ಬುಧವಾರ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಲ್ವರ ಬಂಧನ: ಅಂಜಲಿ ಅವರ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ದತ್ತಾತ್ರೇಯ, ಯಲ್ಲಪ್ಪ, ಜಗದೀಶ ಮತ್ತು ಕಾಶಿನಾಥ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.